ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ದಿನಗಳ ಭೇಟಿಯ ಬಳಿಕ ಹಿಂದಿರುಗಿದ ಗೃಹ ಸಚಿವ ರಾಜ್ನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶ್ಮೀರ ಪರಿಸ್ಥಿತಿಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 4 ಮತ್ತು 5ರಂದು ಶ್ರೀನಗರ ಹಾಗೂ ಜಮ್ಮುಗೆ ಸರ್ವಪಕ್ಷಗಳ ನಿಯೋಗ ಭೇಟಿ ನೀಡಿದ್ದು, ಅಲ್ಲಿಯ ಪರಿಸ್ಥಿಯ ಬಗ್ಗೆ ಮೌಲ್ಯಮಾಪನ ನಡೆಸಿದ ಮಾಹಿತಿಗಳ ವಿವರವನ್ನು ಒಂದು ಗಂಟೆ ಕಾಲ ನಡೆಸಿದ ಸಭೆಯಲ್ಲಿ ರಾಜ್ನಾಥ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಸಲ್ಲಿಸಿದ್ದಾರೆ.
ಸರ್ವಪಕ್ಷಗಳ ನಿಯೋಗದ ಸಂಸದರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕತಾವಾದಿಗಳು ನಿರಾಕರಿಸಿದ್ದು, ಇವರ ವರ್ತನೆ ‘ಕಾಶ್ಮೀಯತ್’ನ ಸ್ಫೂರ್ತಿಯನ್ನು ನಿರಾಕರಿಸುತ್ತಿದೆ. ಪ್ರಜಾಪ್ರಭುತ್ವವನ್ನು ವಿರೋಧಿಸುತ್ತಿದೆ ಎಂದು ಹೇಳಿದ್ದರು.
ಸರ್ವಪಕ್ಷಗಳ ನಿಯೋಗದ ಸದಸ್ಯರು ಬುಧವಾರ ದೆಹಲಿಯಲ್ಲಿ ಸಭೆ ಸೇರುವ ಸಾಧ್ಯತೆ ಇದ್ದು, ಜಮ್ಮು-ಕಾಶ್ಮೀರದ ಭವಿಷ್ಯದ ಯೋಜನೆಗಳನ್ನು ಚರ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.