Wednesday, September 14th, 2016
News13
ರಿಯೋ ಡಿ ಜನೈರೋ: ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2016ರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತದ ದೇವೇಂದ್ರ ಜಝಾರಿಯಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಪುರುಷರ ಜಾವೆಲಿನ್ ಎಸೆತದ ಎಫ್-46 ವಿಭಾಗದ ಫೈನಲ್ನಲ್ಲಿ 63.97 ಮೀಟರ್ ಎಸೆಯುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಜಝಾರಿಯಾ ಈ ಹಿಂದಿನ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.
ರಾಜಸ್ಥಾನ ಮೂಲದ ದೇವೇಂದ್ರ ಜಝಾರಿಯಾ 2004ರ ಅಥೆನ್ಸ್ ಕ್ರೀಡಾಕೂಟದಲ್ಲಿ 62.15 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕದೊಂದಿಗೆ ದಾಖಲೆ ನಿರ್ಮಿಸಿದ್ದರು.
ವಿಶ್ವ ರ್ಯಾಂಕಿಂಗ್ನಲ್ಲಿ 3ನೇ ಸ್ಥಾನದಲ್ಲಿರುವ ದೇವೇಂದ್ರ ಅವರು ಭಾರತಕ್ಕೆ 4ನೇ ಪದಕ ತಂದುಕೊಟ್ಟಿದ್ದಾರೆ. ಭಾರತ ಪ್ಯಾರಾಲಿಂಪಿಕ್ಸ್ನಲ್ಲಿ ಈವರೆಗೆ ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದುಕೊಂಡಿದೆ.