×
Home About Us Advertise With s Contact Us

ಸ್ವಾಪ್ಟ್ ಸ್ಕಿಲ್ ತರಬೇತಿ

ಬೈಂದೂರು : ನಾವುಂದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ. ಮತ್ತು ಬಿ.ಬಿ.ಎಂ ತರಗತಿಯ ವಿದ್ಯಾರ್ಥಿಗಳಿಗೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕ್ಯಾರಿಯರ್ ಗೈಡೆನ್ಸ ವಿಭಾಗದ ಮುಖ್ಯಸ್ಥ ಪ್ರೊ.ಚಂದನ್ ರಾವ್ ಸ್ವಾಪ್ಟ್ ಸ್ಕಿಲ್ ತರಬೇತಿ ನೀಡಿದರು.

BYN-Mar25-6--Soft-Silk

ಅವರು ವಿಶೇಷವಾಗಿ ಇಂದಿನ ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ತಮ್ಮನ್ನು ತಾವು ಸಿದ್ಧಮಾಡಿಕೊಳ್ಳುವುದರ ಬಗ್ಗೆ ಉಪನ್ಯಾಸ ನೀಡಿದರು. ಈ ತರಬೇತಿ ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕ ಸಿಲ್ವೆಸ್ಟರ್ ಡಿ ಅಲ್ಮೇಡಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಪ್ರೊ. ಎಸ್. ನಾರಾಯಣ್ ರಾವ್ ಪ್ರಾಸ್ತಾವಿಕ ಮಾತನಾಡಿದರು.

ಅಂತಿಮ ಬಿ.ಕಾಂ ವಿದ್ಯಾರ್ಥಿ ನಾಗೇಂದ್ರ ಸ್ವಾಗತಿಸಿ, ತೃತೀಯ ಬಿ.ಬಿ.ಎಂ ವಿದ್ಯಾರ್ಥಿ ಪ್ರತಾಪಚಂದ್ರ ಶೆಟ್ಟಿ ತರಬೇತಿದಾರರ ಪರಿಚಯ ಮಾಡಿದರು. ಅಂತಿಮ ಬಿ.ಕಾಂ ವಿದ್ಯಾರ್ಥಿ ಸಂದೇಶ ವಂದಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಶೈಲಿನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top