ಚಂಡೀಗಢ: ಹರ್ಯಾಣ ರಾಜ್ಯವನ್ನು ಆಯುರ್ವೇದ ಮತ್ತು ಯೋಗದ ರಾಜಧಾನಿಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಅಂಬಾಲಾ ಕಂಟೋನ್ಮೆಂಟ್ನಲ್ಲಿ (ಕ್ಯಾಂಟ್) ಆಯುಷ್ ಇಲಾಖೆ ಸ್ಥಾಪಿಸಿದ ಪಂಚಕರ್ಮ ಕೇಂದ್ರ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಈ ಗುರಿ ಸಾಧಿಸಲು ಕುರುಕ್ಷೇತ್ರದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.
ಅಂಬಾಲಾ ಕ್ಯಾಂಟ್ನಲ್ಲಿ 5 ಅಂತಸ್ತಿನ ಸಿವಿಲ್ ಆಸ್ಪತ್ರೆಯನ್ನು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದು ಕ್ಯಾಥ್ ಲ್ಯಾಬ್, ಆಯುಷ್ ಸೇವೆ ಮತು ಇತರ ಅಗತ್ಯ ಸೌಲಭ್ಯಗಳನ್ನು ಹೊಂದಿರುತ್ತದೆ ಎಂದು ವಿಜ್ ಹೇಳಿದ್ದಾರೆ.
ಇದೇ ಮಾದರಿ ಐದು ಅಂದು ಅಂತಸ್ತಿನ ಕ್ಯಾನ್ಸರ್ ಕೇಂದ್ರ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಪ್ರಾಚೀನ ಔಷಧ ವ್ಯವಸ್ಥೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಆಯುಷ್ ಸೇವೆಗಳು ಎಲ್ಲ ಜಿಲ್ಲಾ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.