ನವದೆಹಲಿ: ಉರಿ ಸೆಕ್ಟರ್ ಮೇಲೆ ಉಗ್ರರು ನಡೆಸಿದ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭೂಸೇನೆ, ವಾಯು ಸೇನೆ ಅಧಿಕಾರಿಗಳು ಮತ್ತು ನೌಕಾ ಪಡೆ ಉಪ ಮುಖ್ಯಸ್ಥರೊಂದಿಗೆ ಶನಿವಾರ ಸಭೆ ನಡೆಸಿ ಭಾರತದ ಭದ್ರತೆ ವಿಚಾರದ ಕುರಿತು ಚರ್ಚಿಸಿದ್ದಾರೆ.
ಉರಿ ದಾಳಿಯ ಹಿನ್ನೆಲೆಯಲ್ಲಿ ಈ ಸಭೆ ಹೆಚ್ಚಿನ ಮಹತ್ವ ಪಡೆದಿದೆ ಎನ್ನಲಾಗಿದೆ.
ಆದರೆ ಭದ್ರತಾ ಮೂಲಗಳ ಪ್ರಕಾರ ಇದು ಎಂದು ಎಂದಿನಂತೆ ಸಾಮಾನ್ಯ ಸಭೆಯಾಗಿದೆ. ಶಸ್ತ್ರಾಸ್ತ್ರ ಪಡೆ ಮುಖ್ಯಸ್ಥರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾಸಿಕ ಚರ್ಚೆ ನಡೆಸಿ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸುತ್ತಾರೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ೭ ಲೋಕ ಕ್ಲಯಾಣ್ ಮಾರ್ಗ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಭೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್, ವಾಯು ಸೇನಾ ಮುಖ್ಯಸ್ಥ ಮಾರ್ಷಲ್ ಅರೂಪ್ ರಾಹಾ, ನೌಕಾ ಸೇನೆ ಉಪ ಮುಖ್ಯಸ್ಥ ಕರಂಬೀರ್ ಸಿಂಗ್ ಅಲ್ಲದೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಉಪಸ್ಥಿತರಿದ್ದರು.
ಸಭೆಯಲ್ಲಿ ಉರಿ ದಾಳಿ ಬಳಿಕ ಭಾರತದ ಪ್ರತಿಕ್ರಿಯೆ, ಗಡಿ ಪ್ರದೇಶದ ಪರಿಸ್ಥಿತಿಗಳ ಬಗ್ಗೆ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.