ನವದೆಹಲಿ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 109ನೇ ಜನ್ಮದಿನವಾದ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಗತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ.
‘ಧೈರ್ಯಶಾಲಿಯಾದ ಶಹೀದ್ ಭಗತ್ ಸಿಂಗ್ ಅವರ ಜನ್ಮದಿನವಾದ ಇಂದು ನಾನು ಅವರಿಗೆ ತಲೆಬಾಗಿ ವಂದಿಸುತ್ತೇನೆ. ಅವರು ತಮ್ಮ ಶೌರ್ಯದ ಮೂಲಕ ಭಾರತದ ಇತಿಗಾಸದಲ್ಲಿ ಒಂದು ಅಳಿಸಲಾಗದ ಛಾಪನ್ನು ಮೂಡಿಸಿದ್ದಾರೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಭಗತ್ ಸಿಂಗ್ ಅವರು 1907ರಲ್ಲಿ ಪ್ರಸ್ತುತ ಪಾಕಿಸ್ಥಾನದಲ್ಲಿರುವ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆ (ಹಿಂದಿನ ಲಯಲಪುರ)ಯ ಬಂಗಾ ಗ್ರಾಮದಲ್ಲಿ ಜನಿಸಿದ್ದರು.
23ನೇ ವಯಸ್ಸಿನಲ್ಲಿ ಭಗತ್ ಸಿಂಗ್ರನ್ನು ಶಿವರಾಮ್ ಹರಿ ರಾಜ್ಗುರು ಮತ್ತು ಸುಖ್ದೇವ್ ಥಾಪರ್ ಜೊತೆ ಲಾಹೋರ್ ಜೈಲಿನಲ್ಲಿ ಮಾರ್ಚ್ 23, 1931ರಂದು ಗಲ್ಲಿಗೇರಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.