ನವದೆಹಲಿ: ಮುಂದಿನ 2017ರ ಗಣರಾಜ್ಯೋತ್ಸವಕ್ಕೆ ಅಬುಧಾಬಿ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜೈಯದ್ ಅಲ್ ನಹ್ಯನ್ ಮುಖ್ಯ ಅತಿಥಿಯಾಗಿ ಭಾರತಕ್ಕೆ ಆಗಮಿಸಲಿದ್ದಾರೆ.
2017ರ ಗಣರಾಜ್ಯೋತ್ಸವ ಆಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸಲು ಒಪ್ಪಿಗೆ ಸೂಚಿಸಿದ್ದಕ್ಕೆ ಧನ್ಯವಾದಗಳು. ಇದು ಭಾರತ-ಯುಎಇ ನಡುವಿನ ಸಂಬಂಧಗಳನ್ನು ಹೆಚ್ಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಮತ್ತೊಂದೆಡೆ, ವಿದೇಶಾಂಗ ಸಚಿವಾಲಯ ‘ನಾವು ಭಾರತದ ಪ್ರಿಯ ಸ್ನೇಹಿತ, ಅಬುಧಾಬಿ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜೈಯದ್ ಅಲ್ ನಹ್ಯನ್ ಅವರನ್ನು 2017ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಸ್ವಾಗತಿಸಲು ಬಯಸಿದ್ದೇವೆ ಎಂದು ಟ್ವೀಟ್ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.