ಕುಪ್ವಾರ: ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಸೇನಾ ಶಿಬಿರದ ಮೇಲೆ ಉಗ್ರರು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದು, ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಕುಪ್ವಾರದ ಹಂಡ್ವಾರದಲ್ಲಿರುವ ಸೇನಾ ಕ್ಯಾಂಪ್ ಮೇಲೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಉಗ್ರರು ದಾಳಿ ನಡೆಸಲು ಆರಂಭಿಸಿದ್ದು, ಬೆಳಗ್ಗೆ 10 ಗಂಟೆವರೆಗೆ 5 ತಾಸುಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಉಗ್ರರ ಶೋಧ ಕಾರ್ಯಾಚರಣೆ ವೇಳೆ ಕುಪ್ವಾರದ ಲ್ಯಾಂಗೇಟ್ ಬಳಿ 6.30ರ ಸುಮಾರಿಗೆ ಉಗ್ರರು ಮತ್ತೆ ದಾಳಿ ನಡೆಸಿದ್ದು, ಸೇನೆ ಉಗ್ರರನ್ನು ಹಿಮ್ಮೆಟ್ಟುವಲ್ಲಿ ಯಶಸ್ವಿಯಾಗಿದೆ. ಈ ಪ್ರದೇಶದಲ್ಲಿ ಹೆಚ್ಚುವರಿ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವರದಿಗಳ ಪ್ರಕಾರ ಈ ಪ್ರದೇಶದಲ್ಲಿ ಉಗ್ರರು ಅಡಿಗಿರುವ ಬಗ್ಗೆ ಶಂಕಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.