ನವದೆಹಲಿ: ರೈಲು ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಉದ್ದೇಶದಿಂದ ಭಾರತೀಯ ರೈಲ್ವೆಯು ಜರ್ಮನಿ ಜೊತೆ ಒಪ್ಪಂದ ಮಾಡಲಿದೆ.
ಆರ್ಮನಿಯ ಸಾರಿಗೆ ಮತ್ತು ಡಿಜಿಟಲ್ ಮೂಲಸೌಕರ್ಯ ಸಚಿವ ಅಲೆಕ್ಸಾಂಡರ್ ಡೋಬ್ರಿಂಟ್ ಮತ್ತು ಉನ್ನತ ಮಟ್ಟದ ನಿಯೋಗ ರೈಲ್ವೆ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಲಿದ್ದಾರೆ.
ಅಲೆಕ್ಸಾಂಡರ್ ಅವರು ಅಕ್ಟೋಬರ್ 12ರಿಂದ 15ರ ವರೆಗೆ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಎರಡೂ ರಾಷ್ಟ್ರದ ಸಚಿವರು ರೈಲ್ವೆ ಕ್ಷೇತ್ರದಲ್ಲಿ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ರೈಲ್ವೆ ಕ್ಷೇತ್ರದಲ್ಲಿ ಅಭಿವೃದ್ಧಿ, ಸಹಯೋಗವನ್ನು ಬಲಪಡಿಸಲು ಒಪ್ಪಂದಕ್ಕೆ ಸಹಿ ಹಾಕದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.