ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಗರದ ಬಡ ಜನರಿಗಾಗಿ ಮನೆಗಳ ನಿರ್ಮಾಣಕ್ಕಾಗಿ ವಸತಿ ಮತ್ತು ನಗರ ಬಡತನ ನಿರ್ಮೂಲನೆ ಸಚಿವಾಲಯ (ಹೂಪಾ) ಗುರುವಾರದಿಂದ ಆನ್ಲೈನ್ ಅರ್ಜಿಗಳನ್ನು ಆರಂಭಿಸಲಿದೆ.
ವಸತಿ ಹಾಗೂ ನಗರ ಬಡತನ ನಿರ್ಮೂಲನೆ (ಹೂಪಾ) ಸಚಿವಾಲಯ ಮತ್ತು ಎಲೆಕ್ಟಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾಮನ್ ಸರ್ವೀಸಸ್ ಸೆಂಟರ್ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿ. ನಡುವೆ ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಹಾಗೂ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಯಾವುದೇ ಅಡೆತಡೆ, ಸಮಸ್ಯೆ, ಸೋರಿಕೆಗಳಿಲ್ಲದೇ ಜನರಿಗೆ ಸರ್ಕಾರದ ಸೇವೆ ತಲುಪಿಸುವುದು ಇದರ ಉದ್ದೇಶವಾಗಿದೆ. ನೇರ ಆನ್ಲೈನ್ ಅರ್ಜಿ ಸಲ್ಲಿಕೆಯಿಂದ ಸಂಬಂಧಪಟ್ಟ ಅಧಿಕಾರಿಗಳು ಅವುಗಳನ್ನು ಗುರುತಿಸಿ ಫಲಾನುಭವಿಗಳ ಮನವಿಗೆ ವೇಗದ ಪ್ರತಿಕ್ರಿಯೆ ನೀಡಲು ಸಾಧ್ಯವಾಗಲಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ದೇಶದಾದ್ಯಂತ ನಗರ ಪ್ರದೇಶಗಳಲ್ಲಿರುವ ಸುಮಾರು 60,000 ಸಿಎಸ್ಸಿ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರತಿ ಅರ್ಜಿಗೆ ರೂ. 25 ಇರಲಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.