ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ೨ ದಿನಗಳ ಜಪಾನ್ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭ ಎರಡೂ ರಾಷ್ಟ್ರಗಳು ನಾಗರಿಕ ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಒಪ್ಪಂದದ ಆಂತರಿಕ ನಿಯಮಗಳು ಈಗಾಗಲೇ ಪೂರ್ಣಗೊಂಡಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ ತಿಂಗಳಿನಲ್ಲಿ ಜಪಾನ್ ಪ್ರಧಾನಿ ಶಿನ್ಝೋ ಅಬೇ ಅವರ ಭಾರತ ಪ್ರವಾಸದ ಅವಧಿಯಲ್ಲಿ ಭಾರತ ಮತ್ತು ಜಪಾನ್ ನಾಗರಿಕ ಪರಮಾಣು ಸಹಕಾರ ಒಪ್ಪಂದಕ್ಕೆ ಮೊಹರು ಹಾಕಿತ್ತು. ಆದರೆ ಕೆಲವು ತಾಂತ್ರಿಕ ಹಾಗೂ ಕಾನೂನು ನಿಯಮಗಳನ್ನು ಪೂರ್ಣಗೊಳಿಸಲು ಬಾಕಿ ಇದ್ದು, ಈ ಒಪ್ಪಂದಕ್ಕೆ ಅಂತಿಮವಾಗಿ ಸಹಿ ಹಾಕಬೇಕಿದೆ.
ಈ ಒಪ್ಪಂದದ ಕಾನೂನು ಮತ್ತು ತಾಂತ್ರಿಕ ಅಂಶಗಳು ಸೇರಿದಂತೆ ಆಂತರಿಕ ನಿಯಮಗಳು ಪೂರ್ಣಗೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.