ನವದೆಹಲಿ: ವಿದ್ಯಾರ್ಥಿಗಳಿಗೆ 8ನೇ ತರಗತಿ ವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು ಎಂದು ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ರಾಷ್ಟ್ರೀಯ ಮಂಡಳಿ (ಎನ್ಸಿಇಆರ್ಟಿ) ರಚಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿಯಲ್ಲಿ ತಿಳಿಸಲಾಗಿದೆ.
ಸಂಸದರು, ಎನ್ಜಿಒಗಳು, ಅಲ್ಪಸಂಖ್ಯಾತ ಸಂಘಟನೆಗಳು, ರಾಜ್ಯಗಳು, ಜನರು ದೇಶದಲ್ಲಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಣ ನೀತಿ ರಚನೆ ಬದಲಾವಣೆಗೆ ಸಲ್ಲಿಸಿದ ಅಭಿಪ್ರಾಯಗಳನ್ನು ಪಡೆದು ಸರ್ಕಾರದ ವಿವಿಧ ಚಿಂತಕರು ಸಲಹೆ ನೀಡಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರ ಅವಧಿಯಲ್ಲಿ ನೀತಿ ಸಮಾಲೋಚನೆ ನಡೆಸಲಾಗಿದ್ದು, ಕೆಲವು ಶೈಕ್ಷಣಿಕ ಸಂಸ್ಥೆಗಳು ಸಲ್ಲಿಸಿದ ಸಲಹೆಗಳು ವಿವಾದ ಹುಟ್ಟಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು.
ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ರಾಜಕೀಯ ಪಕ್ಷಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಸಲಹೆಗಳನ್ನು ಆಹ್ವಾನಿಸಿ ನೀತಿ ಚರ್ಚೆ ಪುನರಾರಂಭಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.