ಮುಂಬಯಿ : ವಿವಾದಾತ್ಮಕ ಇಸ್ಲಾಮ್ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಎನ್ಐಎ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದು, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ನ 10 ಕೇಂದ್ರಗಳ ಮೇಲೆ ದಾಳಿ ನಡೆಸಿದೆ.
ವಿವಾದಾತ್ಮಕ ಇಸ್ಲಾಮ್ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿರುವ ಆರೋಪದ ಮೇರೆಗೆ ಸೆಕ್ಷನ್ 153 ಮತ್ತು ಯುಎಪಿಎ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಝಾಕಿರ್ ನಾಯ್ಕ್ಗೆ ಸೇರಿರುವ ಮುಂಬೈನಲ್ಲಿರುವ 10 ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಸಂಘಟನೆಯ ಕೇಂದ್ರಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಝಾಕಿರ್ ನಾಯ್ಕ್ ಎನ್ಐಎ ವಿಚಾರಣೆಗೆ ಆಗಮಿಸಿ ವಿಚಾರಣೆ ಎದುರಿಸುವಂತೆ ನೋಟಿಸ್ ನೀಡುವ ಕುರಿತು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಝಾಕಿರ್ ನಾಯ್ಕ್ ಅವರ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಸಂಘಟನೆಯನ್ನು ಕೇಂದ್ರ ಸರ್ಕಾರ ಭಾರತದಿಂದ ನಿಷೇಧಿಸಿದೆ. ಸಂಘಟನೆಗೆ ಬರುತ್ತಿರುವ ವಿದೇಶಿ ಆರ್ಥಿಕ ನೆರವನ್ನೂ ತಡೆಹಿಡಿಯಲಾಗಿದೆ ಎಂದು ತಿಳಿದುಬಂದಿದೆ.
ಪ್ರಚೋದನಾತ್ಮಕ ಭಾಷಣ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಸಂಘಟನೆಗೆ ಕೇಂದ್ರ ಸರ್ಕಾರ 5 ವರ್ಷಗಳ ನಿಷೇಧ ಹೇರಿತ್ತು. ಸಂಘಟನೆಯ ಕಾನೂನು ಬಾಹಿರ ಚಟುವಟಿಕೆಗಳ ಕುರಿತು ಕೇಂದ್ರ ಸರ್ಕಾರ ಮಾಹಿತಿ ಸಂಗ್ರಹಿಸಿದ್ದು, ಅವುಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ. ವಿದೇಶದಲ್ಲಿರುವ ಝಾಕಿರ್ ನಾಯ್ಕ್ ಭಾರತಕ್ಕೆ ವಾಪಾಸ್ ಆಗಿ ವಿಚಾರಣೆ ನಡೆಸಲೇಬೇಕು ಎಂದು ಬಿಜೆಪಿ ಮುಖಂಡ ಜಾಫರ್ ಇಸ್ಲಾಮ್ ಹೇಳಿದ್ದಾರೆ.
ಕಳೆದ ಮಂಗಳವಾರ ಝಾಕಿರ್ ನಾಯ್ಕ್ ಅವರ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಸಂಘಟನೆಯನ್ನು ಕಾನೂನು ಬಾಹಿರ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.