ನವದೆಹಲಿ: ನರೇಂದ್ರ ಮೋದಿ ಆ್ಯಪ್ ಮುಖಾಂತರ ನೋಟು ರದ್ದತಿಯ ಬಗ್ಗೆ ನಾಗರಿಕರ ಅಭಿಪ್ರಾಯ ತಿಳಿಯಲು ಬಯಸಿದ್ದ ಪ್ರಧಾನಿ ಮೋದಿಯವರ ಸಮೀಕ್ಷೆಯಲ್ಲಿ ಶೇ. 93 ರಷ್ಟು ನಾಗರಿಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿಯವರು ‘ಈ ಐತಿಹಾಸಿಕ ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಹಾಗೂ ಸಮೀಕ್ಷೆಯಲ್ಲಿ ಬಂದಿರುವ ಕಾಮೆಂಟ್ಸ್ಗಳನ್ನು ಒದಲು ಆಹ್ಲಾದಕರವೆನಿಸುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
’ಈ ಸಮೀಕ್ಷೆಯಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು, ದಾಖಲೆ ಸಂಖ್ಯೆಯ ನಾಗರಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ’ ಎನ್ನುವುದನ್ನೂ ಮೋದಿ ಟ್ವೀಟ್ ಮಾಡಿದ್ದಾರೆ.
I thank people for the historic participation in the survey. Its satisfying to read the insightful views & comments. https://t.co/xf14LEiQHT pic.twitter.com/cGSBPlCnE5
— Narendra Modi (@narendramodi) November 23, 2016
ಈ ಸಮೀಕ್ಷೆಯ ವರದಿಯನ್ನು ಮಾಹಿತಿ ತಂತ್ರಜ್ಞಾನ ಮತ್ತು ಟೆಲಿಕಾಂ ಸಚಿವರಾದ ರವಿಶಂಕರ ಪ್ರಸಾದ್ ಸಂಪುಟ ಸಭೆಯಲ್ಲಿ ಬಹಿರಂಗಪಡಿಸಿದ್ದಾರೆ. ಸಮೀಕ್ಷೆಯ 24 ಗಂಟೆಗಳ ಕಾಲಾವಧಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿ ಅವರ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಹಾಗೂ ಇದು ಜನರ ಭಾವನೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಇಲ್ಲಿಯವರೆಗೆ ಇಂತಹ ರಾಜಕೀಯ ನೀತಿಯ ಬಗ್ಗೆ ಯಾವುದೇ ಅಭಿಪ್ರಾಯ ಸಮೀಕ್ಷೆಗಳು ನಡೆದಿರಲಿಲ್ಲ ಎಂದು ಕೂಡ ಹೇಳಿದ್ದಾರೆ.
ಶೇ. 93 ಕ್ಕಿಂತ ಹೆಚ್ಚು ಜನರು ನೋಟು ರದ್ದತಿಯ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ವರದಿಯಾಗಿದೆ. ಕೇವಲ ಶೇ. 2 ರಷ್ಟು ಜನ ಈ ನಿರ್ಧಾರವನ್ನು ‘very poor’ ಎಂದು ರೇಟ್ ಮಾಡಿದ್ದಾರೆ ಎಂದು ಸಮೀಕ್ಷೆಯಲ್ಲಿ ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.