ನವದೆಹಲಿ: ಹೆಚ್ಚುತ್ತಿರುವ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ಮಾಲಿನ್ಯ ನಿಗ್ರಹಿಸಲು ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲಿ ಪಟಾಕಿಗಳ ಮಾರಾಟನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ.
ಪಟಾಕಿಗಳ ಹಾನಿಕಾರಕ ಪರಿಣಾಮಗಳ ಬಗ್ಗೆ ಮುಂದಿನ ಮೂರು ತಿಂಗಳುಗಳ ಒಳಗೆ ಉತ್ತರ ನೀಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕೋರ್ಟ್ ಹೇಳಿದೆ.
ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದ ತ್ರಿಸದಸ್ಯ ಪೀಠ ಈ ತೀರ್ಪು ನೀಡಿದ್ದು, ಇದು ನ.೨೫ರಿಂದ ಕೋರ್ಟ್ನ ಮುಂದಿನ ವಿಚಾರಣೆ ವರಗೆ ಜಾರಿಯಲ್ಲಿ ಇರಲಿದೆ.
ಈ ಹಿಂದೆ ಕೋರ್ಟ್ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮಾಲಿನ್ಯಕಾರಕ ವಸ್ತುಗಳ ದಾಖಲೆಗಳನ್ನು ನೀಡುವಂತೆ ಅರ್ಜಿದಾರ ಅರ್ಜುನ್ ಗೋಪಾಲ್ ಅವರಿಗೆ ಸೂಚಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.