ನವದೆಹಲಿ: ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಈವರೆಗೆ ಬ್ಯಾಂಕ್ ಖಾತೆ ಹೊಂದದೆ ಇರುವ ಕಾರ್ಮಿಕರು ಬ್ಯಾಂಕ್ ಖಾತೆ ತೆರೆಯಲು ಕಾರ್ಮಿಕ ಸಚಿವಾಲಯವು ಹಣಕಾಸು ಸೇವಾ ಇಲಾಖೆಯ ಸಹಯೋಗದಲ್ಲಿ ಪ್ರಚಾರ ಅಭಿಯಾನ ಆರಂಭಿಸಲಿದೆ.
ಪ್ರತಿ ಜಿಲ್ಲೆಯ ನಿರ್ದಿಷ್ಟ ಸ್ಥಳಗಳಲ್ಲಿ ನ.26ರಿಂದ ಕಾರ್ಮಿಕರು ಬ್ಯಾಂಕ್ ಖಾತೆ ತೆರೆಯುವಂತೆ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುವುದು.
ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಅಭಿಯಾನವನ್ನು ಉದ್ಘಾಟಿಸಲಿದ್ದಾರೆ.
ಕೇಂದ್ರ ಸರ್ಕಾರ ಡಿಜಿಟಲ್ ವ್ಯವಹಾರಗಳ ಹೆಚ್ಚಿನ ಹುರುಪಿನೊಂದಿಗೆ ಮುಂದುವರೆಸಲು ಮಾರ್ಗವನ್ನು ಬಳಸಲು ನಿರ್ಧರಿಸಿದೆ. ನಾವು ಈಗಾಗಲೇ ಈ ವಿಚಾರವಾಗಿ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದೇವೆ ಎಂದು ದತಾತ್ರೇಯ ಅವರು ಹೇಳಿದ್ದಾರೆ.
ಎಲ್ಲ ಸಂಸ್ಥೆಗಳು ಮತ್ತು ಸಂಬಂಧಿತ ಜನರು ಶಿಬಿರಕ್ಕೆ ಸೇವೆಗಳು ದೊರೆಯುವಂತೆ ಸಹಕರಿಸಲು ದತ್ತಾತ್ರೇಯ ತಿಳಿಸಿದ್ದಾರೆ.
ಬ್ಯಾಂಕ್ಗಳು, ಉದ್ಯಮ ಅಧಿಕಾರಿಗಳು ಮತ್ತು ಶಿಬಿರಗಳ ಮೂಲಕ ಮುಂದಿನ ಕೆಲವು ದಿನಗಳ ವರೆಗೆ ಅಭಿಯಾನ ಮುಂದುವರೆಸುವಂತೆ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.