ಮುಂಬಯಿ: ಭಾರತೀಯ ಜನತಾ ಪಕ್ಷ ಆಳ್ವಿಕೆಯ ಮಹಾರಾಷ್ಟ್ರದಲ್ಲಿ ನಡೆದ ಮೊದಲ ಹಂತದ ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭಾರೀ ಜಯ ಸಾಧಿಸಿದೆ.
25 ಜಿಲ್ಲೆಗಳ 164 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ 851 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ನ್ಯಾಶನಲ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ವಿರುದ್ಧ ಬಿಜೆಪಿ ತನ್ನ ಹಿಡಿತವನ್ನು ಸಾಧಿಸಿದೆ.
147 ಪುರಸಭಾ ಸಂಸ್ಥೆಗಳು ಮತ್ತು 17 ನಗರ ಪಂಚಾಯತ್ನ 3,705 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 851 ಸ್ಥಾನಗಳೊಂದಿಗೆ 52 ಪುರಸಭಾ ಸಂಸ್ಥೆಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 643 ಸ್ಥಾನಗಳನ್ನು ಗೆದ್ದುಕೊಂಡರೆ ಎನ್ಸಿಪಿ 638 ಸ್ಥಾನಗಳನ್ನು ಪಡೆದಿದೆ.
ಬಿಜೆಪಿಯ ಮೈತ್ರಿ ಪಕ್ಷ ಶಿವಸೇನೆ 514 ಸ್ಥಾನಗಳನ್ನು ಗೆದ್ದುಕೊಂಡಿದೆ.
ಇದು ಬಡವರ ಪರ ಮತ್ತು ಅಭಿವೃದ್ಧಿ ರಾಜಕೀಯದ ಗೆಲುವಾಗಿದೆ. ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಮೇಲೆ ನಂಬಿಕೆ ಇಟ್ಟಿರುವ ಮಹಾರಾಷ್ಟ್ರದ ಜನತೆಗೆ ಧನ್ಯವಾದ ಹೇಳುತ್ತೇನೆ ಎಂದು ಪ್ರಧಾನಿ ನರೇಂದರ ಮೋದಿ ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ಅವರು ಬಿಜೆಪಿ ಕಾರ್ಯಕರ್ತರು ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಪ್ರಶಂಸಿಸಿದ್ದಾರೆ. ಅವರ ಮೂಲಭೂತ ಕಾರ್ಯಗಳು ಬಿಜೆಪಿ ಪಕ್ಷದ ಮೇಲೆ ಜನರು ನಂಬಿಕೆ ಇಡುವಂತೆ ಮಾಡಿದೆ ಎಂದು ಮೋದಿ ಹೇಳಿದ್ದಾರೆ.
ಕಳೆದ 2011ರ ಪುರಸಭಾ ಚುನಾಣೆಯಲ್ಲಿ ಬಿಜೆಪಿ ಪಕ್ಷ 298 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಶಿವಸೇನೆ 264, ಕಾಂಗ್ರೆಸ್ 771 ಮತ್ತು ಎನ್ಸಿಪಿ 916 ಸ್ಥಾನಗಳನ್ನು ಪಡೆದುಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.