ಢಾಕಾ: ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಎರಡು ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದು, ಬುಧವಾರ ಢಾಕಾ ತಲುಪಿದ್ದಾರೆ.
ಕಳೆದ 45 ವರ್ಷಗಳ ಬಳಿಕ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಭಾರತದ ಮೊದಲ ರಕ್ಷಣಾ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮನೋಹರ್ ಪರಿಕ್ಕರ್ ಅವರನ್ನು ಬಾಂಗ್ಲಾದೇಶ ರಕ್ಷಣಾ ಪಡೆಗಳ ಪ್ರಧಾನ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಮೊಹಮ್ಮದ್ ಮಹಫುಜುರ್ ರೆಹ್ಮಾನ್ ಮತ್ತು ಇತರ ಅಧಿಕಾರಿಗಳು ಸ್ವಾಗತಿಸಿದರು.
ಪರಿಕ್ಕರ್ ಅವರು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ, ಅಧ್ಯಕ್ಷ ಅಬ್ದುಲ್ ಹಮೀದ್ ಅವರನ್ನು ಭೇಟಿ ಮಾಡಲಿದ್ದಾರೆ.
ಎರಡೂ ದೇಶಗಳ ರಕ್ಷಣಾ ಸಂಬಂಧಗಳನ್ನು ಬಲಪಡಿಸುವ ಉದ್ದೇಶದಿಂದ ಪರಿಕ್ಕರ್ ಅವರು ಬಾಂಗ್ಲಾದೇಶದ ನಾಗರಿಕ ಮತ್ತು ಮಿಲಿಟರಿಯ ಉನ್ನತ ಅಧಿಕಾರಿಗಳು ಭೇಟಿ ಮಾಡಲಿದ್ದು ಅನಂತರ ಪ್ರಧಾನಿ ಶೇಖ್ ಹಸೀನಾ ಅವರ ಭದ್ರತಾ ಮತ್ತು ರಕ್ಷಣಾ ಸಲಹೆಗಾರ ತರೀಕ್ ಅಹ್ಮದ್ ಸಿದ್ದಿಕಿ (ನಿವೃತ್ತ) ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಮುಂದಿನ ತಿಂಗಳು ಪ್ರಧಾನಿ ಶೇಖ್ ಹಸೀನಾ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ರಕ್ಷಣಾ ಸಹಕಾರ ಒಪ್ಪಂದ ಮತ್ತು ರಕ್ಷಣಾ ಸಂಬಂಧಗಳನ್ನು ಬಲಪಡಿಸುವ ಉದ್ದೇಶದಿಂದ ಮನೋಹರ್ ಪರಿಕ್ಕರ್ ಅವರು ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವುದಾಗಿ ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ಭೂಸೇನೆ, ವಾಯು ಸೇನೆ, ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ನ ಉಪ ಮುಖ್ಯಸ್ಥರ ಜೊತೆ ಪರಿಕ್ಕರ್ ಅವರು ಗುರುವಾರ ಚಿತ್ತಂಗಾಂಗ್ನ ಮಿಲಿಟರಿ ಅಕಾಡೆಮಿಗೆ ಭೇಟಿ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.