ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಗಳಲ್ಲಿ ಕಡಲ ತೀರದಲ್ಲಿ ‘ನಾಡಾ’ ಚೋಡಮಾರುತದ ಭೀತಿ ಎದುರಾಗಿದೆ.
ಚೆನ್ನೈಯಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಮಳೆ ಸಂಭವಿಸಿದೆ. ಮುಂದಿನ ಎರಡು ಮೂರು ದಿನಗಳ ಕಾಲ ಇನ್ನಷ್ಟು ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ ಪುದುಚೆರಿಯ ಕಡಲೂರು ಬಳಿ ಭೂಕುಸಿತದ ಸಂಭವಿಸುವ ಸಾಧ್ಯತೆ ಇದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್)ನ್ನು ನಿಯೋಜಿಸಲಾಗಿದೆ.
ಚೆನ್ನೈನ ಆಗ್ನೇಯ ದಿಕ್ಕಿನಲ್ಲಿ ೭೭೦ ಕಿ.ಮೀ. ದೂರದಲ್ಲಿ ಚಂಡಮಾರುತ ಇದ್ದು, ಇದು ಪಶ್ಚಿಮಾಭಿಮುಖವಾಗಿ ಸಾಗುತ್ತ ತೀಕ್ಷ್ಣಗೊಳ್ಳಬಹುದೆಂದು ನಿರೀಕ್ಷಿಸಲಾಗಿದೆ. ಕಡಲ ತೀರ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರಿಗೆ ಕಡಲ ತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಪುದುಚೇರಿ, ನಾಗಪಟ್ಟಣಂ, ಕಡಲೂರು, ಚೆನ್ನೈಗಳಲ್ಲಿ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.