ಜೈಪುರ: ರಾಜಸ್ಥಾನದ ಸ್ಥಾಳೀಯ ಸಂಸ್ಥೆಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶಗಳು ಪ್ರಕಟಗೊಂಡಿದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷ 19 ಸ್ಥಾನಗಳನ್ನು ಗೆದ್ದುಕೊಂಡಿದೆ. ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದುಕೊಂಡರೆ ಇತರೆ ಸ್ವತಂತ್ರ ಅಭ್ಯರ್ಥಿಗಳು ಕೇವಲ 4 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ.
ರಾಜಸ್ಥಾನದ 3 ಜಿಲ್ಲಾ ಪರಿಷತ್, 10 ಪುರಸಭಾ ಸ್ಥಾನಗಳು ಮತ್ತು 24 ಪಂಚಾಯತ್ ಸಮಿತಿಗಳು ಸೇರಿದಂತೆ ಒಟ್ಟು 37 ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯಿತು.
ಬಿಜೆಪಿ 37ರಲ್ಲಿ 19 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಯ ಉತ್ತಮ ನಿರ್ವಹಣೆಗಾಗಿ ನಾನು ರಾಜಸ್ಥಾನದ ಜನತೆಗೆ ಧನ್ಯವಾದ ಹೇಳುತ್ತೇನೆ ಮತ್ತು ಮುಖ್ಯಮಂತ್ರಿ ವಸುಂಧರಾ ರಾಜೆ ಅವರಿಗೆ ಅಭಿನಂದಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
I thank people of Rajasthan and congratulate @BJP4Rajasthan & CM @VasundharaBJP for BJP’s good performance in the local polls.
— Narendra Modi (@narendramodi) December 2, 2016
24 ಪಂಚಾಯತ್ ಕ್ಷೇತ್ರಗಳಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ 10 ಸ್ಥಾನಗಳನ್ನು ಗೆದ್ದುಕೊಂಡಿದೆ.
10 ಪುರಸಭಾ ಕ್ಷೇತ್ರಗಳಲ್ಲಿ ಬಿಜೆಪಿ 5 ಮತ್ತು ಕಾಂಗ್ರೆಸ್ 3 ಸ್ಥಾನಗಳನ್ನು ಗೆದ್ದುಕೊಂಡಿದೆ.
ಗುಜರಾತ್ ಮತ್ತು ಮಹಾರಾಷ್ಟ್ರ ಉಪಚುನಾವಣೆಗಳಲ್ಲೂ ಬಿಜೆಪಿ ಜಯ ಸಾಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.