ನವದೆಹಲಿ: ಭಾರತದ ಸಂವಿಧಾನದ ಪಿತಾಮಹ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 60ನೇ ವರ್ಷದ ನಿರ್ವಾಣ ದಿವಸ್ ಸ್ಮರಣಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಗೌರವ ಸಲ್ಲಿಸಿದ್ದಾರೆ.
ದೇಶಕ್ಕಾಗಿ ಅವರು ಸಲ್ಲಿಸಿದ ಶ್ರೇಷ್ಠ ಸೇವೆಗೆ ಭಾರತ ಕೃತಜ್ಞವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
I bow to Dr. Babasaheb Ambedkar on his Nirvan Divas. India will always be thankful to Babasaheb for his rich service to the nation.
— Narendra Modi (@narendramodi) December 6, 2016
ಸಂಸತ್ ಆವರಣದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಹಾಗೂ ಇತರ ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ. ಅಂಬೇಡ್ಕರ್ ಅವರ ಸಮಾಧಿ ಮಾಡಲಾಗಿದ್ದ ಚೈತನ್ಯ ಭೂಮಿಯಲ್ಲಿ ಲಕ್ಷಾಂತರ ಜನರು ಆಗಮಿಸಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಗ್ರೇಟರ್ ಮುಂಬಯಿಯ ಪುರಸಭೆ ‘ಮಹಾಪರಿನಿರ್ವಾಣ್ ದಿವಸ್’ದಂದು ಆಗಮಿಸುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಚೈತನ್ಯ ಭೂಮಿಯ ಶಿವಾಜಿ ಪಾರ್ಕ್ ಸುತ್ತಲಿನ ಪ್ರದೇಶದಲ್ಲಿ 10 ನಿಯಂತ್ರಣ ಕೊಠಡಿಗಳು, 11 ಆಂಬುಲೆನ್ಸ್ಗಳನ್ನು ನಿಯೋಜಿಸಲಾಗಿದೆ.
400 ಸ್ಟಾಲ್ಗಳು, 200 ಮೊಬೈಲ್ ಶೌಚಾಲಯಗಳು, ನೀರಿನ ಟ್ಯಾಂಕರ್ಗಳು, ಅಗ್ನಿಶಾಮಕ ದಳವನ್ನು ಸ್ಥಾಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.