ಚೆನ್ನೈ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಅಪ್ಪಳಿಸಿದ್ದ ‘ವರ್ಧಾ’ ಚಂಡಮಾರುತ ಇದೀಗ ತಮಿಳುನಾಡು ಮತ್ತು ಆಂಧ್ರಪ್ರದೇಶದತ್ತ ಸಾಗಿದೆ. ಅಂಡಮಾನ್-ನಿಕೋಬಾರ್ ಮತ್ತು ಚೈನ್ನೈ ಕರಾವಳಿಯಲ್ಲಿ ಭಾನುವಾರದಿಂದ ಭಾರೀ ಮಳೆ ಸಂಭವಿಸುತ್ತಿದ್ದು, ವರ್ಧಾ ಚಂಡಮಾರುತ ಸೋಮವಾರ ಮಧ್ಯಾಹ್ನದ ವೇಳೆಗೆ ತಮಿಳುನಾಡು, ಆಂಧ್ರಪ್ರದೇಶಗಳತ್ತ ಸಾಗಲಿದೆ ಎನ್ನಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ವರ್ಧಾ ಚಂಡಮಾರುತ ಇದೀಗ ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ್ದು, ಹೈಅಲರ್ಟ್ ಘೋಷಿಸಲಾಗಿದೆ.
ಚೈನ್ನೈಯಲ್ಲಿ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ. ತಮಿಳುನಾಡಿದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಚೆನ್ನೈ ಸಮೀಪದ ಪುಲಿಕಟ್ಗೆ 80-100 ಕಿ.ಮೀ. ವೇಗದಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಂಧ್ರ ಪ್ರದೇಶದ ನೆಲ್ಲೋರ್ನಲ್ಲಿ ನಾಲ್ಕ ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ಗಡೂರ್ ಮತ್ತು ಸುಲ್ಲುರ್ಪೇಟ್ ಕ್ಷೇತ್ರಗಳಲ್ಲಿ 7 ಮಂಡಲಗಳನ್ನು ನಿಯೋಜಿಸಲಾಗಿದೆ. ಪ್ರಕಾಶಂ ಕ್ಷೇತ್ರದಲ್ಲಿ 11 ಮಂಡಲಗಳನ್ನು ನಿಯೋಜಿಸಲಾಗಿದೆ.
ಆಂಧ್ರ ಪ್ರದೇಶದಲ್ಲಿ 6 ಮತ್ತು ತಮಿಳುನಡಾಡು ಮತ್ತು ಪುದುಚೆರಿಗಳಲ್ಲಿ 8 ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. 120 ಪೊಲೀಸ್ ಸೇವಾ ದಳ ಸಿಬ್ಬಂದಿಗಳು, 500 ಮಂದಿ ಅಗ್ನಿಶಾಮಕ ದಳ ಸಿಬ್ಬಂದಿಗಳನ್ನುನಿಯೋಜಿಸಲಾಗಿದೆ.
ಉತ್ತರ ತಮಳುನಾಡು, ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಪ್ರದೇಶದಲ್ಲಿ ಮೀನುಗಾರರು ಮುಂದಿನ 36 ಗಂಟೆಗಳ ಕಾಲ ಮೀನುಗಾರಿಕೆಗೆ ಸಮುದ್ರದತ್ತ ತೆರಳದಂತೆ ಎಚ್ಚರಿಕೆ ನೀಡಲಾಗಿದ್ದು, ಜನರು ಸುರಕ್ಷಿತ ಪ್ರದೇಶಗಳಲ್ಲಿ ಉಳಿಯುವಂತೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.