ನವದೆಹಲಿ: ಬಹುಭಾಷಾ ನಟ, ಸೂಪರ್ಸ್ಟಾರ್ ರಜನಿಕಾಂತ್ ಅವರ 66ನೇ ಜನ್ಮದಿನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಹೇಳಿದ್ದಾರೆ. ದಕ್ಷಿಣ ಭಾರತದ ಸ್ಟಾರ್ ರಜನಿಕಾಂತ್ ಅವರ ದೀರ್ಘ ಬಾಳ್ವೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಭ ಹಾರೈಸಿದರು.
‘ಹುಟ್ಟುಹಬ್ಬದ ಶುಭಾಶಯಗಳು, ರಜನಿಕಾಂತ್! ನಿಮ್ಮ ಉತ್ತಮ ಆರೋಗ್ಯ ಮತ್ತು ದೀರ್ಘ ಬಾಳ್ವೆಗೆ ಶುಭ ಹಾರೈಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Happy birthday @superstarrajini! Wishing you a long life filled with good health.
— Narendra Modi (@narendramodi) December 12, 2016
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕಳೆದ ವಾರ ನಿಧನರಾಗಿದ್ದು, ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ರಜನಿಕಾಂತ್ ಅವರು ತಮ್ಮ ಜನ್ಮದಿನ ಆಚರಿಸದಂತೆ ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.