ನವದೆಹಲಿ : ಆರ್ಬಿಐ ಹೊಸ 500 ರೂ. ನೋಟುಗಳ ಮುದ್ರಣದೆಡೆ ಹೆಚ್ಚಿನ ಗಮನ ಹರಿಸುತ್ತಿದ್ದು ಇನ್ನೆರಡು ಮೂರು ವಾರಗಳಲ್ಲಿ ಹಣದ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ನೋಟು ನಿಷೇಧದ ನಂತರ ಪ್ರಾರಂಭದಲ್ಲಿ 2 ಸಾವಿರ ರೂ. ಮುಖಬೆಲೆಯ ನೋಟುಗಳ ಪೂರೈಕೆ ಬಗ್ಗೆ ಹೆಚ್ಚು ಗಮನ ವಹಿಸಲಾಗಿತ್ತು. ಇದೀಗ 500 ರೂ. ಹೊಸ ನೋಟುಗಳ ಮುದ್ರಣದ ಬಗ್ಗೆ ಅತಿ ಹೆಚ್ಚು ಗಮನ ವಹಿಸಲಿದ್ದು ಶೀಘ್ರದಲ್ಲೇ ಹಣದ ಕೊರತೆ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಎಲ್ಲೆಡೆ 2 ಸಾವಿರ ರೂ. ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ದೊರಕುತ್ತಿದೆ. ಹೀಗಾಗಿ 500 ರೂ. ನೋಟುಗಳ ಮುದ್ರಣದ ಕಡೆಗೆ ಗಮನ ಹರಿಸಲಾಗುತ್ತಿದೆ. ಜೊತೆಗೆ ಸುವ್ಯವಸ್ಥಿತ ರೀತಿಯಲ್ಲಿ ಎಲ್ಲಾ ಕಡೆ ಹಂಚಲು ಕ್ರಮ ಕೈಗೊಳ್ಳಲಾಗುವುದು.
ಸರ್ಕಾರವು ಆರ್ಬಿಐ, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಸಹಕಾರಿ ಬ್ಯಾಂಕ್ಗಳಿಗೆ ಅಗತ್ಯವಿರುವ ಹಣ ಪೂರೈಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ದೇಶದಾದ್ಯಂತ ಇರುವ 2 ಲಕ್ಷ ಎಟಿಎಂಗಳು ಕಾರ್ಯ ನಿರ್ವಹಿಸುತ್ತಿದೆ. ಎಟಿಎಂಗಳಿಗೆ ಹಣ ಹಾಕುವ ಬದಲು ಬ್ಯಾಂಕ್ಗಳು ಗ್ರಾಹಕರಿಗೆ ನೇರವಾಗಿ ಹಣ ನೀಡುತ್ತಿರುವ ಹಿನ್ನಲೆಯಲ್ಲಿ ಎಟಿಎಂಗಳಲ್ಲಿ ಹಣದ ಕೊರತೆಯಾಗುತ್ತಿದೆ. ಇದು ಕೂಡ ಶೀಘ್ರದಲ್ಲೇ ಸರಿಯಾಗುವುದು ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.