ನವದೆಹಲಿ: ಉತ್ತರ ಪ್ರದೇಶದಲ್ಲಿ 7000 ಕೋಟಿ ರೂ. ಲಖ್ನೌ ಮೆಟ್ರೋ ರೈಲು ಯೋಜನೆ ಕಾಮಗಾರಿಗೆ 250 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಅವರು ಈ ಹಿಂದೆ 300 ಕೋಟಿ ರೂ. ಬಿಡುಗಡೆ ಮಾಡಿದ್ದು, ಈಗಾಗಲೇ ಒಟ್ಟಾರೆ 550 ಕೋ. ರೂ. ಬಿಡುಗಡೆ ಮಾಡಿದೆ. ಲಖ್ನೌ ಮೆಟ್ರೋ ಯೋಜನೆ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಗಳ ಜಂಟಿ ಯೋಜನೆಯಾಗಿದೆ.
ಮೊದಲ ಹಂತದಲ್ಲಿ ಟ್ರಾನ್ಸ್ಪೋರ್ಟ್ ನಗರ್-ಚಾರ್ಬಾಗ್ ನಡುವಿನ ಮೆಟ್ರೋ ಸೇವೆ ಮಾರ್ಚ್ 2017ರ ಒಳಗಾಗಿ ಸಾರ್ವಜನಿಕರಿಗಾಗಿ ಆರಂಭಗೊಳ್ಳುವ ಬಗ್ಗೆ ನಿರೀಕ್ಷಿಸಲಾಗಿದೆ.
ಡಿ.1ರಂದು ಈ ರೈಲು ಮಾರ್ಗದಲ್ಲಿ ರೈಲು ಸಂಚಾರಕ್ಕೆ ಪರೀಕ್ಷಾರ್ಥ ಚಾಲನೆ ನೀಡಲಾಗಿತ್ತು.
ಸುಮಾರು 6,928 ಕೋಟಿ ರೂ. ವೆಚ್ಚದ ಈ ಯೋಜನೆಗೆ ಕೇಂದ್ರ ಸರ್ಕಾರ ತನ್ನ ಶೇರುಗಳ ಪಾಲಿನ 1,003 ಕೋಟಿ ರೂ., ಅಧೀನ ಸಾಲದ ರೂಪದಲ್ಲಿ 297 ಕೋಟಿ ರೂ. ಹಾಗೂ ಸಾಲದ ರೂಪದಲ್ಲಿ 3500 ಕೋಟಿ ರೂ. ಒದಗಿಸಲಿದೆ.
ಉಳಿದ 2,128 ಕೋಟಿ ರೂ.ಗಳನ್ನು ಉತ್ತರ ಪ್ರದೇಶ ಸರ್ಕಾರ ಒದಗಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.