Tuesday, 20th February 2018
×
Home About Us Advertise With s Contact Us

ಗಂಗೊಳ್ಳಿ : ಶ್ರೀ ಚೌಡೇಶ್ವರಿ ಯುತ್ ಕ್ಲಬ್ ವಾರ್ಷಿಕೋತ್ಸವ

ಬೈಂದೂರು : ಗಂಗೊಳ್ಳಿಯ ಶ್ರೀ ಚೌಡೇಶ್ವರಿ ಯುತ್ ಕ್ಲಬ್ ವಾರ್ಷಿಕೋತ್ಸವ ಸಮಾರಂಭ ಇತ್ತೀಚಿಗೆ ಸ್ಥಳೀಯ ದೊಡ್ಡಹಿತ್ಲು ವಠಾರದಲ್ಲಿ ನಡೆಯಿತು.

BYN-Mar26-3--Jim-&-Sriraj

ಉಡುಪಿ ಜಿಲ್ಲಾ ಪಂಚಾಯತ್‌ನ ಉಪಾಧ್ಯಕ್ಷ ಪ್ರಕಾಶ್ ಟಿ.ಮೆಂಡನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಬಾಲಕೃಷ್ಣ ಶೆಟ್ಟಿ, ಸಾಹಿತಿ ಕೋ.ಶಿವಾನಂದ ಕಾರಂತ್ ಹಾಗೂ ಗಂಗೊಳ್ಳಿ ಸವಿತಾ ಸಮಾಜದ ಅಧ್ಯಕ್ಷ ಮಂಜುನಾಥ ಸಾಲಿಯಾನ್ ಶುಭ ಹಾರೈಸಿದರು.

ಇದೇ ಸಂದರ್ಭ ಅಂತರಾಷ್ಟ್ರೀಯ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ರಾಜೀವ ಕೊಠಾರಿ (ಶ್ರೀರಾಜು) ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಪ್ರವೀಣ ಪೂಜಾರಿ, ಕಾರ್ಯದರ್ಶಿ ರಾಜ ಖಾರ್ವಿ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ನಾಗರಾಜ ಖಾರ್ವಿ ಸ್ವಾಗತಿಸಿದರು. ಪ್ರವೀಣ ಪೂಜಾರಿ ಸಂದೇಶ ವಾಚಿಸಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ರಾಜ ಖಾರ್ವಿ ವಂದಿಸಿದರು.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top