ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆ ಹೆಚ್ಚು ಸ್ಥಾನ ಪಡೆದಿದ್ದು, ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ.
ಯಾವ ಪಕ್ಷವೂ ಬಹುಮತ ಪಡೆಯದ ಕಾರಣ, ಪರಸ್ಪರ ಅಪೇಕ್ಷಿತ ಪಕ್ಷಗಳು ಮೈತ್ರಿಯೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಬೇಕಿದೆ. 227 ಸ್ಥಾನಗಳಲ್ಲಿ ಶಿವಸೇನೆ-84, ಬಿಜೆಪಿ-81, ಕಾಂಗ್ರೆಸ್-31, ಎಂಎನ್ಎಸ್-7, ಪಕ್ಷೇತರರು 14 ಹಾಗೂ ಎನ್ಸಿಪಿ-9 ಪಡೆದಿದ್ದು, ಇನ್ನೆರಡು ಕ್ಷೇತ್ರಗಳ ಫಲಿತಾಂಶ ಬಾಕಿ ಇದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ ಮೈತ್ರಿಕೂಟದ ಸರ್ಕಾರವಿದ್ದರೂ, ಬಿಎಂಸಿ ಚುನಾವಣೆಯಲ್ಲಿ ಇವು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಪರಿಣಾಮ ಯಾರು ಯಾರೊಂದಿಗೆ ಕೈ ಜೋಡಿಸಿ ಆಡಳಿತಕ್ಕೆ ಮುಂದಾಗುತ್ತಾರೋ ಕಾದು ನೋಡಬೇಕು.
ಕೇಂದ್ರ ಸಚಿವ ಗಡ್ಕರಿ ಸಂತಸ
ನೋಟು ಅಮಾನ್ಯೀಕರಣದ ನಂತರವೂ ಜನ ಬಿಜೆಪಿಯನ್ನು ಇಷ್ಟು ಬೆಂಬಲಿಸಿರುವುದು ನಿಜಕ್ಕೂ ಸಂತಸದ ವಿಷಯ. ಜನ ಮೋದಿ ಅವರ ದಿಟ್ಟ ನಿರ್ಣಯವನ್ನು ಮನಸಾ ಸ್ವೀಕರಿಸಿದ್ದಾರೆ ಎಂಬುದಕ್ಕೇ ಈ ಫಲಿತಾಂಶವೇ ಸಾಕ್ಷಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಮುಂಬೈ ಮಹಾನಗರ ಪಾಲಿಕೆ ಫಲಿತಾಂಶದ ಯಶಸ್ಸಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಬಿಜೆಪಿಯ ಎಲ್ಲ ಮುಖಂಡರೂ, ಕಾರ್ಯಕರ್ತರಿಗೂ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.