ನವದೆಹಲಿ: ಶಾಯರಾ ಬಾನು ಸಲ್ಲಿಸಿದ ತ್ರಿವಳಿ ತಲಾಖ್ಗೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಉಲ್ಲೇಖಿತ ತ್ರಿವಳಿ ತಲಾಖ್ ಪದ್ಧತಿಯನ್ನು 38 ವರ್ಷದ ಶಾಯರಾ ಬಾನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಕೇವಲ ಮೂರು ಬಾರಿ ಸರಳವಾಗಿ ತಲಾಖ್ ಹೇಳುವ ಮೂಲಕ ವಿಚ್ಛೇದನ ನೀಡುವ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಿಳೆಯನ್ನು ಇಲ್ಲಿ ಪರಿಗಣನೆಗೆ ತೆಗೆದುಕೊಳ್ಳುವುದೇ ಇಲ್ಲ, ಕುರಾನ್ನಲ್ಲಿ 3 ತಿಂಗಳು ಅವಕಾಶ ನೀಡಬೇಕೆಂದು ಇದ್ದರೂ, ಅದನ್ನೂ ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ ಎಂದು ಶಾಯರಾ ಬಾನು ತಿಳಿಸಿದ್ದಾರೆ. ಮುಸ್ಲಿಂ ಕಾನೂನಿನಡಿಯಲ್ಲಿ ಬಹುಪತಿತ್ವಕ್ಕೂ ಅವಕಾಶ ನೀಡಬೇಕೆಂದು ಅವರು ಕೋರಿದ್ದಾರೆ.
ಕಾಶಿಪುರದ ನಿವಾಸಿ ಶಾಯರಾ ಬಾನು 2012 ರಲ್ಲಿ ರಿಜ್ವಾನ್ ಎಂಬುವರನ್ನು ಮದುವೆಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.