ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿ ಬುಧವಾರ ಎಬಿವಿಪಿ ಕಾರ್ಯಕರ್ತರು ತಿರಂಗ ಯಾತ್ರೆ ನಡೆಸಿದ್ದು, ಬ್ಯಾನರ್, ಧ್ವಜಗಳನ್ನು ವಂದೇ ಮಾತರಂ ಘೋಷಣೆಗಳನ್ನು ಕೂಗಿದರು.
ಗುರುವಾರವೂ ಎಬಿವಿಪಿ ಪ್ರತಿಭಟನಾ ಸಮಾವೇಶಕ್ಕೆ ಕರೆ ನೀಡಿದೆ. ಮಂಗಳವಾರ ಆಲ್ ಇಂಡಿಯಾ ಸ್ಟುಡೆಂಟ್ ಅಸೋಸಿಯೇಶನ್ ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ ಈ ಸಮಾವೇಶವನ್ನು ನಡೆಸಲಾಗುತ್ತಿದೆ.
ರಾಮಜಾಸ್ ಕಾಲೇಜಿನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಸ್ಟುಡೆಂಟ್ ಅಸೋಸಿಯೇಶನ್ ನಡೆಸಿದ ಪ್ರತಿಭಟನೆಯ ವೇಳೆ ಎಬಿವಿಪಿಯ ವಿರುದ್ಧ ಘೋಷಣೆಗಳನ್ನು ಕೂಗಲಾಗಿತ್ತು. ಅಲ್ಲದೇ ಎಬಿವಿಪಿ ಹಿಂಸಾಚಾರವನ್ನು ಹರಡುತ್ತಿದೆ ಎಂದು ಆರೋಪಿಸಲಾಗಿತ್ತು.
ಇದೀಗ ಈ ಪ್ರತಿಭಟನೆಗೆ ಪ್ರತಿಯಾಗಿ ಎಬಿವಿಪಿ ತಿರಂಗ ಮಾರ್ಚ್ ಮತ್ತು ಪ್ರತಿಭಟನಾ ಸಮಾವೇಶಗಳನ್ನು ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.