ನವದೆಹಲಿ; ಆಜಾದಿ ಘೋಷಣೆಗಳನ್ನು ಕೂಗುವುದು ದೇಶದ್ರೋಹ ಎಂದಿರುವ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರು, ಕೆಲವರು ಉಗ್ರ ಅಫ್ಜಲ್ ಗುರುವನ್ನು ನೆನೆಯಲು ದೇಶದ ವಿರುದ್ಧ ಘೋಷಣೆ ಕೂಗುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
ದೇಶದ ವಿರುದ್ಧ ಘೋಷಣೆ ಹಾಕುವುದು ದೇಶದ್ರೋಹವಲ್ಲವಾದರೆ ಅದು ಮತ್ತೇನು? ಎಂದು ಪ್ರಶ್ನಿಸಿರುವ ಅವರು, ದೇಶದ್ರೋಹದ ವ್ಯಾಖ್ಯಾನದ ಬಗ್ಗೆ ಚರ್ಚೆ ಆರಂಭವಾಗಲಿ ಎಂದಿದ್ದಾರೆ.
ಕೆಲವರು ಶಾಂತಿ ಕದಡಲು ಆಜಾದಿ ಘೋಷಣೆಗಳನ್ನು ಹಾಕುತ್ತಿದ್ದಾರೆ, ಕಾಶ್ಮೀರಿ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಿದ್ದಾರೆ. ಇಂತಹವರೇ ಕಾಶ್ಮೀರ, ಛತ್ತೀಸ್ಗಢಗಳಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿಯುತ್ತಿದ್ದಾರೆ. ಉಗ್ರವಾದದ ಪ್ರಾಯೋಜಕರು ಶಸ್ತ್ರಗಳಿಂದಲೇ ಬಲ ಬರುತ್ತದೆ ಎಂಬ ಭ್ರಮೆಯಲ್ಲಿ ಇದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.