ಬೆಂಗಳೂರು: ಬೆಂಗಳೂರಿನ ವಿವಾದಾತ್ಮಕ ಉಕ್ಕಿನ ಫ್ಲೈಒವರ್ ಯೋಜನೆಯನ್ನು ಕೈಬಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಈ ಬಗ್ಗೆ ಪ್ರಕಟಿಸಿದ್ದಾರೆ.
ಸಾಂಕೆ ರೋಡ್ ವರೆಗೆ ವಿಸ್ತರಣೆ ಹೊಂದಿರುವ ಹೆಬ್ಬಾಳ-ಚಾಲುಕ್ಯ ವೃತ್ತದ ನಡುವೆ 6.9 ಕಿ.ಮೀ. ಸ್ಟೀಲ್ ಫ್ಲೈಒವರ್ ನಿರ್ಮಾಣದ ವಿರುದ್ಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಇದೀಗ ಈ ಯೋಜನೆಯನ್ನು ಕೈಬಿಡಲು ತೀರ್ಮಾನಿಸಲಾಗಿದೆ. ಇದರ ವಿರುದ್ಧ ಭ್ರಷ್ಟಾಚಾರ ಆರೋಪಗಳಿವೆ ಎಂದು ಜಾರ್ಜ್ ಹೇಳಿದ್ದಾರೆ.
ಈ ಯೋಜನೆಗಾಗಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕುಟುಂಬ 65 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಈ ಯೋಜನೆ ಕೈಬಿಡಲಾಗಿದೆ ಎಂದು ಹೇಳಲಾಗಿದೆ.