ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಅದಮ್ಯ ಸ್ಫೂರ್ತಿ ಮತ್ತು ಸಮರ್ಪಣೆಗೆ ಸೆಲ್ಯೂಟ್ ಹೊಡೆದಿದ್ದಾರೆ.
ಟ್ವಿಟ್ ಮಾಡಿರುವ ಅವರು, ‘ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಾರಿ ಶಕ್ತಿ ಅದಮ್ಯ ಸ್ಫೂರ್ತಿ ಮತ್ತು ಸಮರ್ಪಣೆಗೆ ಸೆಲ್ಯೂಟ್ ಹೊಡೆಯುತ್ತೇನೆ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಸ್ವಾವಲಂಬನೆಗಾಗಿ, ಸಾಮಾಜಿಕ ಗುಣಮಟ್ಟಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ತಂದಿದೆ’ ಎಂದಿದ್ದಾರೆ.
ಇಂದು ಅವರು ಗುಜರಾತಿನ ಗಾಂಧಿನಗರದಲ್ಲಿ ಮಹಿಳಾ ಸರಪಂಚ್ಗಳ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ. ಇದರಲ್ಲಿ ದೇಶದ ವಿವಿಧ ಭಾಗಗಳ ಮಹಿಳಾ ಸರಪಂಚ್ಗಳು ಭಾಗವಹಿಸಲಿದ್ದಾರೆ. ಕೇಂದ್ರ ಸರ್ಕಾರ ಮತ್ತು ಗುಜರಾತ್ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಇದನ್ನು ಜಂಟಿಯಾಗಿ ಆಯೋಜನೆ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.