ನ್ಯೂಯಾರ್ಕ್: ಹಿಂದೂಗಳ ಬಗ್ಗೆ ಅತೀ ಕೆಟ್ಟ ರೀತಿಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ ಸಿಎನ್ಎನ್ ಚಾನೆಲ್ ವಿರುದ್ಧ ಯುಎಸ್ ಕಾಂಗ್ರೆಸ್ನ ಮೊದಲ ಹಿಂದೂ ಸದಸ್ಯೆ ತುಳಸಿ ಗಬ್ಬಾರ್ಡ್ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಅವರು, ಹಿಂದೂಗಳ ವಿರುದ್ಧ ದ್ವೇಷದ ದಾಳಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಸಿಎನ್ಎನ್ ಹಿಂದೂಧರ್ಮದ ಬಗ್ಗೆ ಕೆಟ್ಟ ಭಾವನೆ ಬರುವ ವರದಿ ಪ್ರಸಾರ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.
‘ನಮ್ಮ ದೇಶದ ಜನರು ವಿವಿಧ ಧರ್ಮಗಳ ನಡುವೆ ಪರಸ್ಪರ ಸಾಮರಸ್ಯ ಮತ್ತು ಗೌರವ ಮೂಡಿಸುವ ಸಲುವಾಗಿ ಶ್ರಮಿಸುತ್ತಿದ್ದಾರೆ. ಆದರೆ ಸಿಎನ್ಎನ್ ಜನರ ಭಿನ್ನಾಭಿಪ್ರಾಯಗಳನ್ನು ಮತ್ತಷ್ಟು ಹೆಚ್ಚಿಸಲು ತನ್ನ ಶಕ್ತಿ ಮತ್ತು ಪ್ರಭಾವವನ್ನು ಬಳಸುತ್ತಿರುವುದು ನನಗೆ ಬೇಸರ ತರಿಸಿದೆ’ ಎಂದು ಗಬ್ಬಾಡ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.