ಅಹ್ಮದಾಬಾದ್: ಗುಜರಾತ್ ಸರ್ಕಾರ ಹಮ್ಮಿಕೊಂಡಿರುವ ಉತ್ತಮ ಕಾರ್ಯಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ಮತ್ತು ಎಚ್ಚರದಿಂದ ಇರಬೇಕು ಎಂಬುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
ಪ್ರಸ್ತುತ ಷಾ ಅವರು ಗುಜರಾತ್ ಪ್ರವಾಸದಲ್ಲಿದ್ದು, ಅಲ್ಲಿನ ಬಿಜೆಪಿ ಸಾಮಾಜಿಕ ಮಾಧ್ಯಮ ತಂಡದೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿ.ಎಂ ವಿಜಯ್ ರೂಪಾಣಿ, ಉಪ ಸಿಎಂ ನಿತಿನ್ ಪಟೇಲ್, ಬಿಜೆಪಿ ರಾಜ್ಯಾಧ್ಯಕ್ಷ ಜೀತು ವಘನಿ ಅವರು ಭಾಗವಹಿಸಿದ್ದರು.
ಈ ವೇಳೆ ಅವರು, ಸಾಮಾಜಿಕ ಜಾಲತಾಣಗಳನ್ನು ಸಕ್ರಿಯವಾಗಿ, ಎಚ್ಚರಿಕೆಯಿಂದ ಬಳಸುವ ಮೂಲಕ ಜನರನ್ನು ತಲುಪಬೇಕು ಮತ್ತು ಸರ್ಕಾರದ ವಿರುದ್ಧದ ನಕಾರಾತ್ಮಕ ಪ್ರಚಾರಗಳನ್ನು ಹತ್ತಿಕ್ಕಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಪ್ರತಿಪಕ್ಷಗಳು ನಡೆಸುತ್ತಿರುವ ಸುಳ್ಳು ಪ್ರಚಾರ, ಸುಳ್ಳು ಆರೋಪಗಳನ್ನು ಸಮರ್ಥವಾಗಿ ಎದುರಿಸಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.