ನವದೆಹಲಿ: ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ಬೆಳಿಗ್ಗೆ ೮ಕ್ಕೆ ಆರಂಭಗೊಂಡಿದೆ.
ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಚುನಾವಣಾ ಆಯೋಗದ ಗೈಡ್ಲೈನ್ನಂತೆ ಭಾರೀ ಬಿಗಿ ಭದ್ರತೆಯನ್ನು ಅಳವಡಿಸಲಾಗಿದೆ. ಮುಖ್ಯ ಚುನಾವಣಾ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನೆ ನಡೆಸುತ್ತಿದ್ದಾರೆ.
ಉತ್ತರಪ್ರದೇಶದ 75 ಜಿಲ್ಲೆಗಳ 28 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. ಉತ್ತರಾಖಂಡದ 15 ಕೇಂದ್ರಗಳಲ್ಲಿ, ಮಣಿಪುರ 11 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಪಂಜಾಬ್ನ 54 ಕೇಂದ್ರಗಳಲ್ಲಿ ಮತಯೆಣಿಕೆ ಆರಂಭವಾಗಿದ್ದು, 14,000 ಅಧೀಕಾರಿಗಳು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಉತ್ತರ ಗೋವಾದ 19 ಕ್ಷೇತ್ರಗಳ ಮತ ಎಣಿಕೆ ಪಣಜಿಯಲ್ಲಿ ನಡೆಯುತ್ತಿದ್ದಾರೆ, ದಕ್ಷಿಣ ಗೋವಾದ 21 ಕ್ಷೇತ್ರಗಳ ಮತ ಎಣಿಕೆ ಮಡ್ಗೋನ್ ನಗರದಲ್ಲಿ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.