ನವದೆಹಲಿ: ಚಿಲ್ಲರೆ ಹಣದುಬ್ಬರ ಫೆಬ್ರವರಿ ತಿಂಗಳಿನಲ್ಲಿ ಕಳೆದ ನಾಲ್ಕು ತಿಂಗಳಗಳಲ್ಲೇ ಶೇ.3.65ರಷ್ಟು ಏರಿಕೆಯಾಗಿದೆ. ಆಹಾರ ಧಾನ್ಯಗಳ ಬೆಲೆಗಳಲ್ಲಿ ಏರಿಕೆಯಾಗಿರುವುದು ಇದಕ್ಕೆ ಮುಖ್ಯ ಕಾರಣ ಎಂದು ಅಂದಾಜಿಸಲಾಗಿದೆ.
ಗ್ರಾಹಕ ಬೆಲೆ ಸೂಚ್ಯಂಕ ಪ್ರಕಾರ ಹಣದುಬ್ಬರ ಜನರವರಿಯಲ್ಲಿ ಶೇ. 3.17ರಷ್ಟಿತ್ತು. ಕಳೆದ ವರ್ಷ ಫೆಬ್ರವರಿಯಲ್ಲಿ ಹಣದುಬ್ಬರ ಶೇ. 5.26 ಆಗಿತ್ತು.
ಸೆಂಟ್ರಲ್ ಸ್ಟ್ಯಾಟಿಸ್ಟಿಕ್ಸ್ ಆಫಿಸ್ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಆಹಾರ ಧಾನ್ಯಗಳ ಹಣದುಬ್ಬರ ಜನವರಿಯ ಶೇ. 0.61ರಿಂದ ಫೆಬ್ರವರಿಯಲ್ಲಿ ಶೇ. 2.01ಗೆ ಏರಿಕೆಯಾಗಿದೆ. ಆದರೆ ತರಕಾರಿಗಳ ಬೆಲೆ ಶೇ.8.29 ಮತ್ತು ದ್ವಿದಳ ಧಾನ್ಯಗಳ ಬೆಲೆ ಶೇ. 9.02ರಷ್ಟು ಇಳಿಕೆಯಾಗಿದೆ.
ಬೆಲೆ ಏರಿಕೆಯಿಂದ ಆರ್ಬಿಐಯ ಸಾಲದ ಮೇಲಿನ ಬಡ್ಡಿದರ ಕಡಿತದ ಮೇಲೆ ಪರಿಣಾಮ ಬೀರಲಿದ್ದು, ಅದು ಹಣದುಬ್ಬರ ಅಪಾಯವನ್ನು ಆಧರಿಸಿ ಫೆಬ್ರವರಿಯಲ್ಲಿ ಸಾಲಗಳ ಮೇಲಿನ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.