ರಾಂಚಿ: ಜಾರ್ಖಂಡ್ನ ಪಲಮಾವು ಜಿಲ್ಲೆಯಲ್ಲಿ ನಕ್ಸಲರ ಎರಡು ಗುಂಪುಗಳ ನಡುವಿನ ಗುಂಡಿನ ದಾಳಿಯಲ್ಲಿ ಮೂವರು ನಕ್ಸಲರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿತಾಚು ಗ್ರಾಮದ ಮೊಹಮ್ಮದ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಗುಂಡಿನ ದಾಳಿ ಸಂಭವಿಸಿದ್ದು, ಮೂವರ ಶವ ಪತ್ತೆಯಾಗಿದೆ. ಮೂವರಲ್ಲಿ ಓರ್ವನನ್ನು ಅಜಯ್ ಯಾದವ್ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕೆ ಪೊಲೀಸರು 10 ಲಕ್ಷ ರೂ. ಬಹುಮಾನ ಘೋಷಿಸಿದ್ದರು.
ಈ ಸಂದರ್ಭ ಗಾಯಗೊಂಡಿದ್ದ ಓರ್ವ ನಕ್ಸಲ್ನನ್ನು ಬಂಧಿಸಲಾಗಿದ್ದು, ಆತನಿಂದ ಒಂದು ಎ-ಕೆ47 ಸೇರಿದಂತೆ 7 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.