ವಾಷಿಂಗ್ಟನ್: ಅಮೆರಿಕಾಗೆ ಭೇಟಿ ನೀಡಿರುವ ಭಾರತದ ರಕ್ಷಣಾ ಸಲಹೆಗಾರ ಅಜಿತ್.ಕೆ.ದೋವಲ್ ಅವರು ಶನಿವಾರ ಅಲ್ಲಿನ ಸರ್ಕಾರದ ಗಣ್ಯರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.
ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮಟ್ಟಿಸ್, ಹೋಮ್ಲ್ಯಾಂಡ್ ಸೆಕ್ಯೂರಿಟಿ ಜನರಲ್ ಜಾಣ್ ಕೆಲ್ಲೆ, ನ್ಯಾಷನಲ್ ಸೆಕ್ಯೂರಿಟಿ ಅಡ್ವೈಸರ್ ಎಚ್.ಆರ್.ಮೆಕ್ಮಾಸ್ಟರ್ ಅವರೊಂದಿಗೆ ಸಭೆ ನಡೆಸಿದ ದೋವಲ್ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.
ಈ ವೇಳೆ ರಕ್ಷಣಾ ಸಹಕಾರವನ್ನು ವಿಸ್ತರಿಸಲು ಮತ್ತು ಕಡಲ ತೀರ ರಕ್ಷಣೆ, ಭಯೋತ್ಪಾದನಾ ನಿಗ್ರಹ ಸೇರಿದಂತೆ ವಿವಿಧ ಪ್ರಾದೇಶಿಕ ವಿಷಯಗಳ ಪರಸ್ಪರ ಸಹಯೋಗಕ್ಕೆ ಭಾರತ ಮತ್ತು ಅಮೆರಿಕ ನಿರ್ಧರಿಸಿವೆ.
ದಕ್ಷಿಣ ಏಷ್ಯಾದ ಭಯೋತ್ಪಾದನೆ ಒಡ್ಡುತ್ತಿರುವ ಸವಾಲನ್ನು ಎದುರಿಸಲು ಭಾರತ ಮತ್ತು ಅಮೆರಿಕಾದ ಸಹಕಾರವನ್ನು ವಿಸ್ತರಿಸುವ ಬಗ್ಗೆ ಸಭೆಯಲ್ಲಿ ಹೆಚ್ಚಿನ ಒತ್ತು ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.