×
Home About Us Advertise With s Contact Us

ಗಡ್ಕರಿಗೆ ಸೋನಿಯಾ ಗಾಂಧಿ ಪತ್ರ

gadkariನವದೆಹಲಿ: ವಿವಾದಾತ್ಮಕ ಭೂಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದಾರೆ.

ಮಸೂದೆಯ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವ ಗಡ್ಕರಿಯವರ ವಿರುದ್ಧ ಪತ್ರದಲ್ಲಿ ಅಸಮಾಧಾನ ತೋಡಿಕೊಂಡಿರುವ ಅವರು, ಬಹಿರಂಗ ಚರ್ಚೆಗೆ ಆಹ್ವಾನ ನೀಡುವ ಮೂಲಕ ನೀವು ಒಮ್ಮತದ ಸಾಂಪ್ರದಾಯಿಕ ಮಾದರಿಯನ್ನು ವ್ಯಂಗ್ಯವಾಡಿದ್ದೀರಿ ಎಂದು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರೈತ ವಿರೋಧಿ ಮತ್ತು ಬಡವರ ವಿರೋಧಿಯಾಗಿದೆ, ಉದ್ಯಮಿಗಳ ಅನುಕೂಲಕ್ಕಾಗಿ ಈ ಸರ್ಕಾರ ಸಮಾಜದ ದುರ್ಬಲ ವರ್ಗದವರ ಹಕ್ಕುಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಯುಪಿಎ ಸರ್ಕಾರದ ಭೂಸ್ವಾಧೀನ ಮಸೂದೆಯನ್ನು ತಿದ್ದುಪಡಿ ಎನ್‌ಡಿಎ ಸರ್ಕಾರ ರೂಪಿಸಿರುವ ಮಸೂದೆ ರೈತರ ನೋವನ್ನು ಗೇಲಿ ಮಾಡುವಂತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ರೈತರು ಈ ದೇಶದ ಬೆನ್ನೆಲುಬು ಮತ್ತು ಅವರ ಹಿತಾಸಕ್ತಿಯ ರಕ್ಷಣೆಗಾಗಿ ಕಾಂಗ್ರೆಸ್ ಸದಾ ಹೋರಾಡುತ್ತದೆ ಎಂದಿದ್ದಾರೆ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top