ನವದೆಹಲಿ : ಶೀಘ್ರದಲ್ಲೇ ದೇಶದ ಮಹಿಳೆಯರಿಗಾಗಿ ಹೊಸ ರಾಷ್ಟ್ರೀಯ ನೀತಿ ಜಾರಿಗೆ ಬರಲಿದೆ. ಈ ಮೂಲಕ ಮಹಿಳೆಯರಿಗೆ ಅನೇಕ ಸೌಲಭ್ಯಗಳು ದೊರೆಯಲಿವೆ.
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ನೇತೃತ್ವದ ಸಮಿತಿ ಮಹಿಳೆಯರಿಗೆ ಪ್ರಯೋಜನವಾಗುವಂತಹ ಹೊಸ ರಾಷ್ಟ್ರೀಯ ನೀತಿಯನ್ನು ರೂಪಿಸಿದೆ. ಇದಕ್ಕೆ ಸಂಪುಟದ ಒಪ್ಪಿಗೆಯಷ್ಟೇ ಬಾಕಿಯಿದೆ ಎಂದು ಮೂಲಗಳು ತಿಳಿಸಿವೆ.
ಈ ರಾಷ್ಟ್ರೀಯ ನೀತಿಯು ಜಾರಿಗೆ ಬಂದಲ್ಲಿ ಮಹಿಳೆಯರಿಗೆ ಬಹಳಷ್ಟು ಪ್ರಯೋಜನಗಳು ಆಗಲಿವೆ. ಏಕಾಂಗಿ ಮಹಿಳೆಯರಿಗೆ ಆದಾಯ ತೆರಿಗೆಯಲ್ಲಿ ರಿಯಾಯಿತಿ, ಶೂನ್ಯ ವೆಚ್ಚದಲ್ಲಿ ಮೂಲಭೂತ ಆರೋಗ್ಯ ತಪಾಸಣೆಗಾಗಿ ಆಧಾರ್ ಲಿಂಕ್ ಆರೋಗ್ಯ ಕಾರ್ಡ್, ಗರ್ಭಿಣಿಯರಿಗೆ ನಗದು ರಹಿತ ವೈದ್ಯಕೀಯ ಸೇವೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಪಡೆಯಬಹುದು.
ಋತುಸಾವ್ರದ ನೈರ್ಮಲ್ಯ ಕಾಪಾಡುವ ಎಲ್ಲಾ ಉತ್ಪನಗಳ ಮೇಲೆ ತೆರಿಗೆ ವಿನಾಯಿತಿ, ಶುದ್ಧ ಸಾರ್ವಜನಿಕ ಶೌಚಾಲಯಗಳ ಸ್ಥಾಪನೆ, ಗ್ರಾಮೀಣ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್, ಲಿಂಗಾಧಾರಿತ ದೌರ್ಜನ್ಯಗಳ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಮತ್ತು ಕಾನೂನು ನೆರವು, ಗ್ರಾಮೀಣ ಮಹಿಳೆಯರಿಗಾಗಿ ಜನ್ ಧನ್ ಯೋಜನೆ, ಸರ್ವ ಶಿಕ್ಷಾ ಅಭಿಯಾನದಡಿಯಲ್ಲಿ ಗ್ರಾಮೀಣ ಮಹಿಳೆಯರನ್ನು 100% ಸಾಕ್ಷರರನ್ನಾಗಿ ಮಾಡುವ ಗುರಿ ಸೇರಿದಂತೆ ಅನೇಕ ಸೌಲಭ್ಯಗಳು ಈ ನೀತಿಯಲ್ಲಿ ಇರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.