ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಅವರ ದೆಹಲಿ ಮತ್ತು ಚೆನ್ನೈನ ನಿವಾಸಗಳ ಮೇಲೆ ಮಂಗಳವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮನ್ಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದ ಚಿದಂಬರಂ ಅವರು 2008ರಲ್ಲಿ ಐಎನ್ಎಕ್ಸ್ ಮೀಡಿಯಾಗೆ ಕ್ಲಿಯರೆನ್ಸ್ ನೀಡುವಲ್ಲಿ ಭ್ರಷ್ಟಾಚಾರ ಎಸಗಿರುವ ಆರೋಪವನ್ನು ಎದುರಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಅವರ ನಿವಾಸಗಳ ಮೇಲೆ ಸಿಬಿಐ ದಾಳಿಯಾಗಿದ್ದಯ, ಶೋಧ ಕಾರ್ಯ ಮುಂಬಯಿ, ದೆಹಲಿ ಚೆನ್ನೈ ಮತ್ತು ಗುರುಗ್ರಾಮ್ಗಳಿಗೂ ವಿಸ್ತರಿಸಲಿದೆ. ಚಿದಂಬರಂ ಅವರ ಸ್ವಂತ ಊರು ಚೆನ್ನೈನ 14 ಕಡೆಗಳಲ್ಲಿ ಈಗಾಗಲೇ ಶೋಧ ನಡೆಸಲಾಗಿದೆ
ಐಎನ್ಎಕ್ಸ್ ಮೀಡಿಯಾ ಪೀಟರ್ ಮುಖರ್ಜಿ ಮತ್ತು ಇಂದ್ರಾಣಿ ಮುಖರ್ಜಿ ಅವರ ಒಡೆತನದ್ದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.