ನವದೆಹಲಿ: ಸಚಿವರುಗಳು ಮತ್ತು ಸಂಸತ್ತು ಸದಸ್ಯರು ಸರಿಯಾದ ಸಮಯಕ್ಕೆ ತಮ್ಮ ಸರ್ಕಾರಿ ನಿವಾಸಗಳನ್ನು ಖಾಲಿ ಮಾಡದೇ ಹೋದರೆ ದಂಡ ವಿಧಿಸುವುದಾಗಿ ಕೇಂದ್ರ ಸಂಪುಟ ಹೇಳಿದೆ. ಅಷ್ಟೇ ಅಲ್ಲದೇ ಅವರನ್ನು ವಿಚಾರಣೆಗೊಳಪಡಿಸುವುದಾಗಿಯೂ ನೂತನ ಆದೇಶದಲ್ಲಿ ತಿಳಿಸಲಾಗಿದೆ.
ಸರ್ಕಾರಿ ಬಂಗಲೆಗಳಲ್ಲಿ ಅಧಿಕಾರವಧಿಯ ಮೀರಿದರೂ ವಾಸಿಸುತ್ತಿರುವ ರಾಜಕಾರಣಿಗಳಿಗೆ ಈ ನೂತನ ಆದೇಶ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ.
ಇದು ಮಾತ್ರವಲ್ಲದೇ 10 ನ್ಯೂಕ್ಲಿಯರ್ ರಿಯಾಕ್ಟರ್ಗಳನ್ನು ಸ್ಥಾಪಿಸಲೂ ಸಂಪುಟ ಸಮ್ಮತಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನವದೆಹಲಿಯಲ್ಲಿ ಸಂಪುಟ ಸಭೆ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.