ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೇ29ರಿಂದ ಜರ್ಮನಿ, ಸ್ಪೇನ್ ಮತ್ತು ರಷ್ಯಾಗಳಿಗೆ ಪ್ರವಾಸ ಆರಂಭಿಸಲಿದ್ದಾರೆ. ಈ ದೇಶಗಳೊಂದಿಗಿನ ಬಾಂಧವ್ಯ ವೃದ್ಧಿ ಮತ್ತು ಭಾರತದಲ್ಲಿ ಬಂಡವಾಳ ಹೂಡುವಂತೆ ಉತ್ತೇಜಿಸುವುದು ಈ ಪ್ರವಾಸದ ಉದ್ದೇಶವಾಗಿದೆ.
ಜರ್ಮನ್ ಮತ್ತು ಸ್ಪೇನ್ಗಳಿಗೆ ದ್ವಿಪಕ್ಷೀಯವಾಗಿ ಭೇಟಿ ಕೊಡುತ್ತಿದ್ದು, ರಷ್ಯಾಗೆ ಸೈಂಟ್ ಪೀಟರ್ಸ್ಬರ್ಗ್ ಇಂಟರ್ನ್ಯಾಷನಲ್ ಎಕನಾಮಿಕ್ ಫೋರಂನಲ್ಲಿ ಭಾಗವಹಿಸುವ ಸಲುವಾಗಿ ಭೇಟಿಕೊಡುತ್ತಿದ್ದಾರೆ. ಜೂನ್ 1-3ರವರೆಗೆ ಇದು ನಡೆಯಲಿದೆ. ಇದರಲ್ಲಿ ಜಾಗತಿಕ ಮಟ್ಟದ ಸಾವಿರಾರು ಉದ್ಯಮಿಗಳು ಭಾಗವಹಿಸಲಿದ್ದಾರೆ.
ಈ ವೇಳೆ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.