ನವದೆಹಲಿ: ಜೈಲಿನೊಳಗಿರುವ ಹರಿಯಾಣದ ಮಾಜಿ ಮುಖ್ಯಮಂತ್ರಿ 82 ವರ್ಷದ ಓಂ ಪ್ರಕಾಶ್ ಚೌಟಾಲ ಅವರು 12 ತರಗತಿ ಪರೀಕ್ಷೆಯನ್ನು ಬರೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಕಲಿಯಲು ವಯಸ್ಸಿನ ಮಿತಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪ ಹೊತ್ತಿರುವ ಇವರು ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅಲ್ಲಿಂದಲೇ ಕಳೆದ ತಿಂಗಳು 12ನೇ ತರಗತಿಯ ಪರೀಕ್ಷೆಯನ್ನು ಬರೆದಿದ್ದರು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಜೈಲಿನ ಲೈಬ್ರರಿಗಳಿಗೆ ಸದಾ ಭೇಟಿಕೊಡುವ ಅವರು ಇದೀಗ ಮುಂದಿನ ಹಂತದ ಶಿಕ್ಷಣವನ್ನೂ ಪೂರೈಸುವ ಇಂಗಿತವನ್ನು ಹೊಂದಿದ್ದಾರೆ. ಜೈಲು ಅವಧಿಯನ್ನು ಅರ್ಥಪೂರ್ಣವಾಗಿ ಕಳೆಯಬೇಕು ಎಂಬ ಆಶಯ ಅವರದ್ದು ಎಂದು ಅವರ ಪುತ್ರ ಅಅಭಯ್ ಚೌಟಾಲ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.