ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ಡಿಎ ಸರಕಾರ ಆಡಳಿತಕ್ಕೆ ಬಂದು 3 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿಯು ದೇಶದ ಹಲವಾರು ಕಡೆ ಸರಣಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ’ಮೇ 26ರಿಂದ ಜೂನ್ 15ರವರೆಗೆ ದೇಶದ 900 ನಗರಗಳಲ್ಲಿ ಮೇಕಿಂಗ್ ಆಫ್ ಡೆವಲಪ್ಡ್ ಇಂಡಿಯಾ(MODI) ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.
ಮೇ 26ರಂದು ಗುಹಾವಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮೋದಿ ಸರಕಾರವು 3 ವರ್ಷಗಳಲ್ಲಿ ತೆಗೆದುಕೊಂಡ ಹಲವಾರು ಮಹತ್ವದ ಯೋಜನೆಗಳ ಬಗ್ಗೆ ದೇಶದ ಸಾಮಾನ್ಯರಿಗೆ ಮತ್ತು ಯುವಕರಿಗೆ ಅರಿವನ್ನು ಮೂಡಿಸುವ ಸಲುವಾಗಿ ಮೋದಿ ಫೆಸ್ಟ್ನ್ನು ದೇಶದಾದ್ಯಂತ ಆಯೋಜನೆ ಮಾಡಲಾಗುತ್ತಿದೆ ಎಂದರು.
ಅಲ್ಲದೇ ಸರಕಾರವು ’ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಸಮ್ಮೇಳನವನ್ನು ದೇಶದಾದ್ಯಂತ ನಡೆಸುತ್ತಿದ್ದು ಸರಕಾರದ ಯೋಜನೆಗಳಿಂದ ಪ್ರಯೋಜನ ಪಡೆದುಕೊಂಡವರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.