ವಾಷಿಂಗ್ಟನ್: ಗಡಿಯಾಚೆಗಿನ ಭಯೋತ್ಪಾದನೆಯನ್ನು ಪೋಷಣೆ ಮಾಡುತ್ತಿರುವ ಪಾಕಿಸ್ಥಾನವನ್ನು ರಾಜತಾಂತ್ರಿಕವಾಗಿ ಮೂಲೆಗುಂಪು ಮಾಡಲು ಮತ್ತು ಅದರ ವಿರುದ್ಧ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ಭಾರತ ಮುಂದಾಗಿದೆ ಎಂದು ಅಮೆರಿಕಾದ ರಕ್ಷಣಾ ಗುಪ್ತಚರ ಮುಖ್ಯಸ್ಥ ವಿನ್ಸೆಂಟ್ ಸ್ಟೆವರ್ಟ್ ಹೇಳಿದ್ದಾರೆ.
ಭಾರತೀಯ ಸೇನೆ ಪಾಕಿಸ್ಥಾನದ ವಿರುದ್ಧ ದಾಳಿ ನಡೆಸಿ ಅದರ ಎರಡು ಬಂಕರ್ಗಳನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ಭಾರತದಲ್ಲಿ ನಡೆದ ಹಲವಾರು ಭಯೋತ್ಪಾದನ ದಾಳಿಗಳ ತರುವಾರ ಭಾರತ ಮತ್ತು ಪಾಕಿಸ್ಥಾನದ ನಡುವಣ ಸಂಬಂಧ ತೀವ್ರವಾಗಿ ಹದಗೆಟ್ಟಿದೆ ಎಂದು ಸ್ಟವರ್ಟ್ ಅಭಿಪ್ರಾಯಪಟ್ಟಿದ್ದಾರೆ.
ಹಿಂದೂ ಮಹಾಸಾಗರದ ವಿಸ್ತಾರವಾದ ತನ್ನ ಪ್ರದೇಶದಲ್ಲಿನ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವುದಕ್ಕಾಗಿ ಭಾರತ ತನ್ನ ಸೇನೆಯನ್ನು ಆಧುನೀಕರಣಗೊಳಿಸುತ್ತಿದೆ. ಅಲ್ಲದೇ ಏಷ್ಯಾದಾದ್ಯಂತ ತನ್ನ ರಾಜತಾಂತ್ರಿಕ ಹಾಗೂ ಆರ್ಥಿಕ ಪ್ರಭಾವವನ್ನು ಸ್ಥಾಪಿಸುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.