ಮುಂಬಯಿ: ವೈದ್ಯಕೀಯ ಪರಿಕರಗಳಿಗಾಗಿ ಇತರ ದೇಶಗಳಿಗೆ ಅವಲಂಭಿತವಾಗುವುದನ್ನು ತಗ್ಗಿಸಿ ಆ ಮೂಲಕ ದೇಶದ ಎಲ್ಲಾ ಜನರಿಗೂ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಗುರುವಾರ ಮುಂಬಯಿಯ ಟಾಟಾ ಮೆಮೋರಿಯಲ್ ಸೆಂಟರ್ನ 75ನೇ ವರ್ಷಗಳ ಸಾಮಾಜಿಕ ಸೇವೆಯ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ವೀಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು.
‘ಶೇ.70ರಷ್ಟು ವೈದ್ಯಕೀಯ ಪರಿಕರಗಳು ವಿದೇಶಗಳಿಂದ ಆಮದಾಗುತ್ತದೆ. ಈ ಸನ್ನಿವೇಶ ಬದಲಾಗಲೇ ಬೇಕು, ಇದರಿಂದ ಚಿಕಿತ್ಸೆಗಳು ದುಬಾರಿಯಾಗುತ್ತಿದೆ’ ಎಂದರು.
ದರದಲ್ಲಿ ವೈದ್ಯಕೀಯ ಚಿಕಿತ್ಸೆ ಎಲ್ಲರಿಗೂ ಸಿಗಲಿ ಎಂಬ ಕಾರಣಕ್ಕೆ ರಾಷ್ಟ್ರೀಯ ಆರೋಗ್ಯ ನಿಯಮವನ್ನು ಜಾರಿಗೊಳಿಸಲಾಗಿದೆ ಎಂದರು.
ಎಲ್ಲಾ ವರ್ಗದ ಜನರಿಗೂ ಉತ್ತಮ ಗುಣಮಟ್ಟದ ಚಿಕಿತ್ಸೆಗಳು ಸಿಗುವಂತೆ ಮಾಡುವುದು ನಮ್ಮ ಸರ್ಕಾರದ ಗುರಿ. ಅದೇ ಕಾರಣಕ್ಕಾಗಿ ದೇಶದಾದ್ಯಂತ ಏಮ್ಸ್ ಮತ್ತು ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸುವ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.