ನವದೆಹಲಿ: ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಘೋಷಿಸಿದ್ದಾರೆ.
ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಈಗಿನಿಂದಲೇ ಎಲ್ಲಾ ಪಕ್ಷಗಳು ತಯಾರಿಯನ್ನು ಆರಂಭಿಸಿವೆ.
ಮಾಧ್ಯಮವೊಂದಕ್ಕೆ ಸಂದರ್ಶ ನೀಡಿದ ಅಮಿತ್ ಷಾ ಅವರು, ಯಡಿಯೂರಪ್ಪ ಕರ್ನಾಟಕದಲ್ಲಿ ಬಿಜೆಪಿಯ ಸಿಎಂ ಅಭ್ಯರ್ಥಿ ಎಂದು ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈಗಿರುವ ೨೮೨ ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನವನ್ನು ಗಳಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
‘ಚುನಾವಣೆ ಇನ್ನೂ ಎರಡು ವರ್ಷ ದೂರ ಇದೆ. ಎಲ್ಲಾ ಪಕ್ಷಗಳೂ ನಮಗೆ ಸವಾಲೊಡ್ಡಲಿದೆ. ಆದರೆ ನಾವು ನಮ್ಮ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂಬ ಭರವಸೆ ಇದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.