ಜೈಪುರ: ರಾಜಸ್ಥಾನದಲ್ಲಿನ 4,900 ಗ್ರಾಮ ಪಂಚಾಯತ್ಗಳು ಬಯಲು ಶೌಚಮುಕ್ತಗೊಂಡಿದ್ದು, ಕಳೆದ ಮೂರು ವರ್ಷದಲ್ಲಿ ಅಲ್ಲಿ ಬರೋಬ್ಬರಿ 58.26 ಶೌಚಾಲಯಗಳನ್ನು ನಿರ್ಮಿಸಲಾಗಿದೆ.
ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ ಶೌಚಾಲಯ ನಿರ್ಮಾಣ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಪಂಚಾಯತ್ ರಾಜ್ ಇಲಾಖೆಯು ಅಲ್ಲಿನ ಸಿಎಂ ವಸುಂಧರಾ ರಾಜೆ ಅವರಿಗೆ ಸಲ್ಲಿಕೆ ಮಾಡಿದೆ. ಸ್ವಚ್ಛ ಭಾರತ ಅಭಿಯಾನದಡಿ ಅಲ್ಲಿ ಶೌಚಾಲಯ ನಿರ್ಮಾಣದ ಕಾರ್ಯಗಳು ಭರದಿಂದ ಸಾಗುತ್ತಿದೆ.
ಉಳಿದ ಎಲ್ಲಾ ಗ್ರಾಮ ಪಂಚಾಯತ್ಗಳನ್ನೂ ಬಯಲು ಶೌಚಮುಕ್ತಗೊಳಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ರಾಜಸ್ಥಾನದಲ್ಲಿ ಒಟ್ಟು 9,891 ಗ್ರಾಮಪಂಚಾಯತ್ಗಳಿವೆ.
ಅಲ್ಲದೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಅಂಗನವಾಡಿಗಳನ್ನು ಗುರುತಿಸಿ ಅವುಗಳಿಗೆ ಮಾದರಿ ಅಂಗನವಾಡಿ ಎಂಬ ಬಿರುದು ಕೊಡುವಂತೆ ರಾಜೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.