Tuesday, 20th February 2018
×
Home About Us Advertise With s Contact Us

ರಾಜ್ಯ ಸರಕಾರಿ ನೌಕರರ ವೈದ್ಯಕೀಯ ವೆಚ್ಚ ನಿಧಿಯಿಂದ ಪ್ರತಿ ತಾಲೂಕಿಗೆ 70ಲಕ್ಷ

Kundapur NEWSಬೈಂದೂರು: ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಬಾಕಿ ಉಳಿದಿದ್ದ ರಾಜ್ಯ ಸರಕಾರಿ ನೌಕರರ ವೈದ್ಯಕೀಯ ವೆಚ್ಚ ನಿಧಿಯು ಪ್ರತಿ ತಾಲೂಕಿಗೆ (ಕಾರ್ಕಳ, ಕುಂದಾಪುರ, ಉಡುಪಿ) ರೂ. 70 ಲಕ್ಷದಂತೆ 2.10 ಕೋಟಿ ಬಿಡುಗಡೆಯಾಗಿದೆ ಎಂದು ಜಿಪಂ ಶಿಕ್ಷಣ ಮತ್ತು ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ತಿಳಿಸಿದ್ದಾರೆ.

ಈ ಹಿಂದೆ ಇದರ ಬಗ್ಗೆ ಸಾಕಷ್ಟು ಮನವಿ ನೀಡಿದ್ದೂ, ಹೋರಾಟ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಬಾರಿ ವೈದ್ಯಕೀಯ ವೆಚ್ಚ ನಿಧಿಯ ಬಿಡುಗಡೆಯಾಗುವಲ್ಲಿ ಸಹಕರಿಸಿದ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಪಂ, ತಾಪಂನ ಎಲ್ಲಾ ಸದಸ್ಯರು ಮತ್ತು ಸಂಬಂಧಿಸಿದ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಗೌರಿ ದೇವಾಡಿಗ ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top